ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಫೆ.೬ರಂದು ದೆಹಲಿ ಚಲೋಗೆ ಕರೆ; ಫೆ.೭ರಂದು ಪ್ರತಿಭಟನೆ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗುತ್ತಿದ್ದಂತೆ ಕೆಲ ಕಾಂಗ್ರೆಸ್ಸ್ ನಾಯಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯ ವಿರುದ್ಧ ಫೆ.೬ರಂದು ದೆಹಲಿ ಚಲೋ ಯಾತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
06:31 PM Feb 02, 2024 IST | Maithri S

ಬೆಂಗಳೂರು: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗುತ್ತಿದ್ದಂತೆ ಕೆಲ ಕಾಂಗ್ರೆಸ್ಸ್ ನಾಯಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯ ವಿರುದ್ಧ ಫೆ.೬ರಂದು ದೆಹಲಿ ಚಲೋ ಯಾತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

Advertisement

ಕಾಂಗ್ರೆಸ್ಸ್ ನ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿ ಫೆ.೭ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿ ನಮ್ಮ ಹಕ್ಕನ್ನು ಕೇಳುತ್ತೇವೆ. ಇದು ಕೇಂದ್ರ ಸರ್ಕಾರದ ವಿರುದ್ಧ ನಡೆಯಲಿರುವ ಯಾತ್ರೆಯಾಗಿದ್ದು, ತೆರಿಗೆ ತಾರತಮ್ಯವನ್ನು ಖಂಡಿಸುತ್ತೇವೆ ಎಂದು ವಿಧಾನಸೌಧದ ಸಮ್ಮೇಳ ಸಭಾಂಗಣದ ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿ ಹೇಳಿದರು.

ಮಹಾರಾಷ್ಟ್ರದ ನಂತರ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯವಾಗಿದ್ದರೂ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಕ್ಕಿಲ್ಲ. ೨೦೧೮-೧೯ರಲ್ಲಿ ಸಿಕ್ಕಿದ ಅನುದಾನಕ್ಕಿಂತ ೪೦%-೪೫% ಕಡಿಮೆ ಆಗಿದೆ. ಬಜೆಟ್ ಡಬಲ್ ಆದರೂ ತೆರಿಗೆ ಪಾಲು ಹೆಚ್ಚು ಸಿಗುತ್ತಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Advertisement

ದಕ್ಷಿಣದ ರಾಜ್ಯಗಳಿಂದ ಸಂಗ್ರಹವಾಗುವ ತೆರಿಗೆಯ ಹಣ ಉತ್ತರದ ರಾಜ್ಯಗಳಿಗೆ ಹೆಚ್ಚು ಹಂಚಿಕೆಯಾಗುತ್ತಿರುವುದು ಈ ಅಸಮಾದಾನಕ್ಕೆ ಕಾರಣವಾಗಿದ್ದು, ಇದು ಹೀಗೇ ಮುಂದುವರಿದರೆ ದಕ್ಷಿಣದಲ್ಲಿ ಪ್ರತ್ಯೇಕ ದೇಶಕ್ಕಾಗಿ ಬೇಡಿಕೆ ಇಡಬೇಕಾದೀತು ಎಂದು ಡಿ.ಕೆ.ಸುರೇಶ್ ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದರು.

Advertisement
Tags :
CongressDK SHIVAKUMARindiaLatestNewsNewsKannadaಕರ್ನಾಟಕ
Advertisement
Next Article