For the best experience, open
https://m.newskannada.com
on your mobile browser.
Advertisement

ಮುಡಾ ಅಕ್ರಮ ಖಂಡಿಸಿ ಜು.12ರಂದು ಬಿಜೆಪಿಯಿಂದ ಪ್ರತಿಭಟನೆ: ಬಿ.ವೈ ವಿಜಯೇಂದ್ರ

ಮುಡಾದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ  ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
03:34 PM Jul 10, 2024 IST | Chaitra Kulal
ಮುಡಾ ಅಕ್ರಮ ಖಂಡಿಸಿ ಜು 12ರಂದು ಬಿಜೆಪಿಯಿಂದ ಪ್ರತಿಭಟನೆ  ಬಿ ವೈ ವಿಜಯೇಂದ್ರ

ಬೆಂಗಳೂರು: ಮುಡಾದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ  ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Advertisement

ಬೆಂಗಳೂರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ.

ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

Advertisement

ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

Advertisement
Tags :
Advertisement