For the best experience, open
https://m.newskannada.com
on your mobile browser.
Advertisement

ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
02:03 PM Apr 10, 2024 IST | Chaitra Kulal
ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೇ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಕೂಡಲೇ ಅವರ ವಿರುದ್ಧ ಸ್ವಯಂ ದೂರು ದಾಖಲು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisement

Advertisement
Tags :
Advertisement