ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.
12:08 PM May 16, 2024 IST | Ashitha S

ಬೆಂಗಳೂರು: ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

Advertisement

ಪ್ರಭುದ್ಧ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ಕಳೆದ ದಿನ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಭುದ್ಧ ಈ ಹಿಂದೆ ಎರಡು-ಮೂರು ಬಾರಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಇದೀಗ ಮನೆಯಲ್ಲಿ ಯಾರು ಇಲ್ಲದ ವೇಳೆ ಚಾಕುವಿನಿಂದ ಕುತ್ತಿಗೆ ಹಾಗೂ ಕೈಯನ್ನ ಕೊಯ್ದುಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೂ ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

Advertisement

 

Advertisement
Tags :
crimedeathDIEDindiaLatestNewsNewsKarnatakaಬಾತ್​ ರೂಂಬೆಂಗಳೂರು
Advertisement
Next Article