ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿಜಾಬ್ ನಿಷೇಧ ಆದೇಶ ವಾಪಾಸ್; ಸಿಎಂ ವಿರುದ್ದ ಆರ್.ಅಶೋಕ್ ವಾಗ್ದಾಳಿ

ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.
10:45 AM Dec 23, 2023 IST | Ashitha S

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.

Advertisement

ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳುತ್ತಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪುಹಾಕದ ಹೈಕಮಾಂಡ್ ಇವೆಲ್ಲದರ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಿಜಾಬ್ ವಿಷಯ ಪ್ರಸ್ತಾಪಿಸಿ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Advertisement

ಕಳೆದ ದಿನ ಮೈಸೂರು ಜಿಲ್ಲೆ ನಂಜನಗೂಡು ತಾ| ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

Advertisement
Tags :
BJPCongressGOVERNMENTindiaLatestNewsಆರ್.ಅಶೋಕ್ನವದೆಹಲಿಪ್ರಕರಣಬೆಂಗಳೂರುಸಿದ್ದರಾಮಯ್ಯ
Advertisement
Next Article