ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಬ್ಬರದ ಅರ್ಧಶತಕ ಸಿಡಿಸಿದ ರಚಿನ್ ರವೀಂದ್ರ

ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಫೆ.21) ಶುರುವಾಗಿದೆ. ವೆಲ್ಲಿಂಗ್ಟನ್​ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರಚಿನ್ ರವೀಂದ್ರ ಅಬ್ಬರಿಸಿದ್ದಾರೆ. ಈ ಮೂಲಕ ಚೊಚ್ಚಲ ಟಿ20 ಅರ್ಧಶತಕ ಪೂರೈಸಿದ್ದಾರೆ.
02:49 PM Feb 21, 2024 IST | Ashitha S

ವೆಲ್ಲಿಂಗ್ಟನ್: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಫೆ.21) ಶುರುವಾಗಿದೆ. ವೆಲ್ಲಿಂಗ್ಟನ್​ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರಚಿನ್ ರವೀಂದ್ರ ಅಬ್ಬರಿಸಿದ್ದಾರೆ. ಈ ಮೂಲಕ ಚೊಚ್ಚಲ ಟಿ20 ಅರ್ಧಶತಕ ಪೂರೈಸಿದ್ದಾರೆ.

Advertisement

ವೆಲ್ಲಿಂಗ್ಟನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ದಾಂಡಿಗ ರಚಿನ್ ರವೀಂದ್ರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಡೆವೊನ್ ಕಾನ್ವೆ ಇನಿಂಗ್ಸ್ ಆರಂಭಿಸಿದರು.

ಕಾನ್ವೆ ಹಾಗೂ ರಚಿನ್ ರವೀಂದ್ರ ಭರ್ಜರಿ ಜೊತೆಯಾಟವಾಡಿದರು. ಆರಂಭದಲ್ಲಿ ಎಚ್ಚರಿಕೆವಾಡಿದ ರಚಿನ್ 16 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 14 ರನ್​ಗಳು ಮಾತ್ರ. ಇದಾದ ಬಳಿಕ ಬ್ಯಾಟಿಂಗ್ ಗೇರ್ ಬದಲಿಸಿದ ರಚಿನ್ ಆಸೀಸ್ ಬೌಲರ್​ಗಳ ಬೆಂಡೆತ್ತಲು ಶುರು ಮಾಡಿದರು. ಪರಿಣಾಮ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಇದು ಟಿ20 ಕ್ರಿಕೆಟ್​ನಲ್ಲಿ ರಚಿನ್ ರವೀಂದ್ರ ಅವರ ಮೊದಲ ಅರ್ಧಶತಕ ಎಂಬುದು ವಿಶೇಷ.

Advertisement

ಇನ್ನು ಅರ್ಧಶತಕ ಬೆನ್ನಲ್ಲೇ ಸಿಡಿಲಬ್ಬರದ ಮುಂದುವರೆಸಿದ ರಚಿನ್ 35 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 68 ರನ್​ ಚಚ್ಚಿದರು. ಮತ್ತೊಂದೆಡೆ ಕಾನ್ವೆ 46 ಎಸೆತಗಳಲ್ಲಿ 2 ಸಿಕ್ಸ್ ಮತ್ತು 5 ಫೋರ್​ಗಳೊಂದಿಗೆ 63 ರನ್​ಗಳ ಕೊಡುಗೆ ನೀಡಿದರು.

 

Advertisement
Tags :
indiaLatestNewsNewsKannadaಆಸ್ಟ್ರೇಲಿಯಾನವದೆಹಲಿನ್ಯೂಝಿಲೆಂಡ್ರಚಿನ್
Advertisement
Next Article