For the best experience, open
https://m.newskannada.com
on your mobile browser.
Advertisement

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ಧ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಹೇಳಿದ್ದಾರೆ.
03:21 PM May 16, 2024 IST | Ashitha S
ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ  ಹಿಂದೆ ಸರಿಯೊಲ್ಲ  ರಘುಪತಿ ಭಟ್

ಉಡುಪಿ: ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ಧ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಹೇಳಿದ್ದಾರೆ.

Advertisement

ಅವರು ಇಲ್ಲಿನ ಕರಂಬಳ್ಳಿಯಲ್ಲಿರುವ ತಮ್ಮ ಮನೆಯಲ್ಲಿ ಚುನಾವಣಾ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಟಿಕೆಟ್ ಸಿಗ್ಲಿಲ್ಲ ಅಂತ ಮೇ 20ರ ವರೆಗೆ ಗಲಾಟೆ ಮಾಡ್ತಾನೆ, ನಂತರ ನಾಮಪತ್ರ ಹಿಂದಕ್ಕೆ ಪಡಿತಾನೆ ಎಂದು ಪಕ್ಷದ ನಾಯಕರು ತಿಳಿದುಕೊಂಡಿದ್ದಾರೆ, ಆದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ. ಗೆದ್ದು ಬಿಜೆಪಿಯ ವಿಧಾನ ಪರಿಷತ್ ಸದಸ್ಯನಾಗುತ್ತೇನೆ ಎಂದರು. ವಿಧಾನಸಭಾ ಚುನಾವಣೆಯಲ್ಲಿ ತನಗೆ ಟಿಕೆಟ್ ಸಿಗದಂತೆ ಷಡ್ಯಂತ್ರ ಮಾಡಿದರು, ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ನಾಯಕರು ತಮ್ಮನ್ನು ಕರೆದು ಮಾತನಾಡಿಸಲಿಲ್ಲ. ಟಿಕೆಟ್ ನೀಡದ ಬಗ್ಗೆ ಮನವರಿಕೆ ಮಾಡಲಿಲ್ಲ, ಈಗ ಬಂದು ಸ್ಪರ್ಧಿಸಬೇಡಿ ಎನ್ನುತ್ತಿದ್ದಾರೆ.

Advertisement

ಇನ್ನು ಮಂಗಳವಾರ ರಾತ್ರಿ ರಘುಪತಿ ಭಟ್ಟರ ಮನೆಯಲ್ಲಿ ಪಂಜುರ್ಲಿ ದೈವದ ನೇಮ ನಡೆದಿದ್ದು, ಈ ಸಂದರ್ಭದಲ್ಲಿ ಭಟ್ಟರು ದೈವದಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ತನ್ನ ಸ್ಪರ್ಧೆಯ ಬಗ್ಗೆ ಪ್ರಶ್ನೆ ಕೇಳಿದರು, ಅದಕ್ಕೆ ದೈವವು ಚುನಾವಣೆಗೆ ಸ್ಪರ್ಧಿಸು, ನೀನೇ ಗೆಲ್ಲುತ್ತಿ ಎಂದು ಅಭಯ ಕೊಟ್ಟಿದೆ. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.

Advertisement
Tags :
Advertisement