ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಹುಲ್ ದ್ರಾವಿಡ್ ಅವಧಿ ಅಂತ್ಯ: ವಿವಿಎಸ್ ಲಕ್ಷ್ಮಣ್ ಯುಗ ಆರಂಭ ?

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲು ಟೀಮ್ ಇಂಡಿಯಾದ ಒಂದು ಯುಗದ ಮುಕ್ತಾಯವನ್ನು ಸೂಚಿಸಿದೆ. ಜೊತೆಗೆ ಪ್ರಸ್ತುತ ಎಸ್​ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರು ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಆಯ್ಕೆ ಆಗಲಿದ್ದಾರೆ ಎನ್ನಲಾಗಿದೆ.
01:37 PM Nov 23, 2023 IST | Ashitha S

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲು ಟೀಮ್ ಇಂಡಿಯಾದ ಒಂದು ಯುಗದ ಮುಕ್ತಾಯವನ್ನು ಸೂಚಿಸಿದೆ. ಜೊತೆಗೆ ಪ್ರಸ್ತುತ ಎಸ್​ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರು ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಆಯ್ಕೆ ಆಗಲಿದ್ದಾರೆ ಎನ್ನಲಾಗಿದೆ.

Advertisement

ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿನ ಭಾರತದ ಸೋಲು ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ʼಲಕ್ಷ್ಮಣ್ ಅವರು ಕೋಚ್ ಸ್ಥಾನಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಸಮಯದಲ್ಲಿ, ಲಕ್ಷ್ಮಣ್ ಬಿಸಿಸಿಐನ ಉನ್ನತ ಮುಖ್ಯಸ್ಥರನ್ನು ಭೇಟಿ ಮಾಡಲು ಅಹ್ಮದಾಬಾದ್‌ಗೆ ಕೂಡ ತೆರಳಿದ್ದರು.

ಅವರು ಟೀಮ್ ಇಂಡಿಯಾ ಕೋಚ್ ಆಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ ಮತ್ತು ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಅವರು ಖಾಯಂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ,” ಎಂದು ಬಿಸಿಸಿಐ ಕೆಲ ಮೂಲಗಳಿಗೆ ತಿಳಿಸಿದೆ. ರಾಹುಲ್ ದ್ರಾವಿಡ್ ಭಾರತೀಯ ತಂಡದೊಂದಿಗೆ ತನ್ನ ಎರಡು ವರ್ಷಗಳ ಒಪ್ಪಂದವನ್ನು ವಿಸ್ತರಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ವರದಿಗಳು ತಿಳಿಸಿವೆ.

Advertisement

ಸದ್ಯ ವೈಜಾಗ್‌ನಲ್ಲಿ ಇಂದಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20I ಸರಣಿಗೆ ದ್ರಾವಿಡ್ ಅವರ ಆಪ್ತ ಸ್ನೇಹಿತ ಲಕ್ಷ್ಮಣ್ ಕೋಚ್ ಆಗಿ ಆಯ್ಕೆ ಕಾರ್ಯನಿರ್ವಹಿಸುತ್ತಿದ್ದಾರೆ.  ಹೀಗಾಗಿ ಮುಂದಿನ ದಿನಗಳಲ್ಲಿ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾದ ಕೋಚ್‌ ಆಗಿ ಮುಂದುವರೆಯುತ್ತಾರ ? ಅಥವಾ ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

Advertisement
Tags :
indiaLatestNewsNewsKannadaಟೀಮ್‌ ಇಂಡಿಯಾನವದೆಹಲಿರಾಹುಲ್ ದ್ರಾವಿಡ್ವಿವಿಎಸ್ ಲಕ್ಷ್ಮಣ್ವಿಶ್ವಕಪ್
Advertisement
Next Article