ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಗ್ರಾಮಾಂತರದಿಂದ ರಾಹುಲ್ ಗಾಂಧಿ ಸ್ಪರ್ಧೆ.?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರ ಬಿಟ್ಟು ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. 2019 ರಲ್ಲಿ ಉತ್ತರಪ್ರದೇಶದ ಅಮೇಥಿ ಮತ್ತು ಕೇರಳದ ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು.
08:51 AM Feb 27, 2024 IST | Ashitha S

ವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರ ಬಿಟ್ಟು ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. 2019 ರಲ್ಲಿ ಉತ್ತರಪ್ರದೇಶದ ಅಮೇಥಿ ಮತ್ತು ಕೇರಳದ ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು.

Advertisement

ವಯನಾಡು ಕ್ಷೇತ್ರದಲ್ಲಿ ನಾಲ್ಕು ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ವಯನಾಡು ಕ್ಷೇತ್ರ ಬಿಟ್ಟು ಮತ್ತೊಂದು ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿರುವ ರಾಹುಲ್ ಗಾಂಧಿ ಈ ಬಾರಿಯೂ ಕೂಡ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಉತ್ತರಪ್ರದೇಶದ ಅಮೇಥಿ ಜೊತೆಗೆ ಕರ್ನಾಟಕ ಇಲ್ಲವೇ ತೆಲಂಗಾಣದ ಒಂದು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಸ್ಪರ್ಧೆಗೆ ರಾಜ್ಯ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಇಂದಿರಾ ಗಾಂಧಿ, ಬಳ್ಳಾರಿ ಕ್ಷೇತ್ರದಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.  ಕರ್ನಾಟಕದ ಬೆಂಗಳೂರು ಗ್ರಾಮಾಂತರ, ತೆಲಂಗಾಣದ ಮಲ್ಕಾಜ್ ಗಿರಿ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Advertisement

Advertisement
Tags :
BJPBreakingNewsCongressGOVERNMENTindiaKARNATAKALatestNewsNewsKannadaಬೆಂಗಳೂರುರಾಹುಲ್ ಗಾಂಧಿ
Advertisement
Next Article