For the best experience, open
https://m.newskannada.com
on your mobile browser.
Advertisement

ಇಂಗ್ಲೆಂಡ್‌ ವಿರುದ್ಧದ ಐದನೇ ಟೆಸ್ಟ್‌ನಿಂದ ಕೆಎಲ್‌ ರಾಹುಲ್‌ ಔಟ್

ಇಂಗ್ಲೆಂಡ್‌ ವಿರುದ್ಧದ ಧರ್ಮಶಾಲಾ ಟೆಸ್ಟ್‌ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಭಾರತೀಯ ಕ್ರಿಕೆಟ್‌ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಪ್ರಸಕ್ತ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ತೋರಿರುವ ರಜತ್ ಪಾಟೀದಾರ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅತ್ತ ಕನ್ನಡಿಗ ಕೆಎಲ್‌ ರಾಹುಲ್‌ ತಂಡದಿಂದ ಹೊರಬಿದ್ದಿದ್ದಾರೆ.
03:34 PM Feb 29, 2024 IST | Ashitha S
ಇಂಗ್ಲೆಂಡ್‌ ವಿರುದ್ಧದ ಐದನೇ ಟೆಸ್ಟ್‌ನಿಂದ ಕೆಎಲ್‌ ರಾಹುಲ್‌ ಔಟ್

ಮುಂಬೈ: ಇಂಗ್ಲೆಂಡ್‌ ವಿರುದ್ಧದ ಧರ್ಮಶಾಲಾ ಟೆಸ್ಟ್‌ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಭಾರತೀಯ ಕ್ರಿಕೆಟ್‌ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಪ್ರಸಕ್ತ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ತೋರಿರುವ ರಜತ್ ಪಾಟೀದಾರ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅತ್ತ ಕನ್ನಡಿಗ ಕೆಎಲ್‌ ರಾಹುಲ್‌ ತಂಡದಿಂದ ಹೊರಬಿದ್ದಿದ್ದಾರೆ.

Advertisement

ಹೌದು. . . ಮಾರ್ಚ್​ 7 ರಿಂದ 11 ರವರೆಗೆ ಧರ್ಮಶಾಲಾದಲ್ಲಿ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಒಂದು ವಾರಕ್ಕೂ ಅಧಿಕ ಸಮಯ ಉಳಿದಿದೆ. ಅದಾಗ್ಯೂ ಟೀಂ ಇಂಡಿಯಾ ಪಾಳದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಅದರಂತೆ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗಿರುವ ಕನ್ನಡಿಗ ಕೆಎಲ್ ರಾಹುಲ್, ಐದನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ.

Advertisement

ರಾಹುಲ್ ಇನ್ನೂ ಫಿಟ್ ಆಗಿಲ್ಲ. ಸದ್ಯ ಈ ಆಟಗಾರ ಲಂಡನ್​ನಲ್ಲಿದ್ದು, ವೈದ್ಯಕೀಯ ತಂಡ ಅವರ ಫಿಟ್ನೆಸ್ ಮೇಲೆ ಕಣ್ಣಿಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

Advertisement
Tags :
Advertisement