ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದಿನಿಂದ ಮೂರು ದಿನ ಸಾಧಾರಣ ಮಳೆ: ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:30 AM Apr 04, 2024 IST | Ashitha S

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ 6ರವರೆಗೆ ಬಿಸಿ ಗಾಳಿ ಬೀಸಲಿದೆ. ಬಾಗಲಕೋಟೆ, ಗದಗ, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಮೂರು ದಿನ ಬಿಸಿ ಗಾಳಿ ಬೀಸಲಿದೆ.

ಏಪ್ರಿಲ್ 7ರಿಂದ 9ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಏಪ್ರಿಲ್ 7ರಂದು ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.

Advertisement

ಏ. 8 ರಂದು ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್ 9ರಂದು ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ರಾಯಚೂರು, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಾಮರಾಜನಗರ, ಮಂಡ್ಯ, ಮೈಸೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

Advertisement
Tags :
GOVERNMENTindiaKARNATAKANewsKarnatakaಹವಾಮಾನ ಇಲಾಖೆ
Advertisement
Next Article