For the best experience, open
https://m.newskannada.com
on your mobile browser.
Advertisement

ಇಂದು ಈ ಜಿಲ್ಲೆಗೆ ಭಾರಿ ಮಳೆ ಮುನ್ಸೂಚನೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಕೊಂಚ ತಣ್ಣಗಾಗಿದ್ದಾನೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
07:12 AM Jul 10, 2024 IST | Nisarga K
ಇಂದು ಈ ಜಿಲ್ಲೆಗೆ ಭಾರಿ ಮಳೆ ಮುನ್ಸೂಚನೆ   7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
ಇಂದು ಈ ಜಿಲ್ಲೆಗೆ ಭಾರಿ ಮಳೆ ಮುನ್ಸೂಚನೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಕೊಂಚ ತಣ್ಣಗಾಗಿದ್ದಾನೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Advertisement

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

Advertisement

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಿಲಿದೆ. ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ಹಾಸನ ಜಿಲ್ಲೆಗಳಲ್ಲೂ ವಿಪರೀತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement
Tags :
Advertisement