For the best experience, open
https://m.newskannada.com
on your mobile browser.
Advertisement

ಸೂಪರ್ ಪವರ್ ಆಗುವತ್ತ ಭಾರತ ದಾಪುಗಾಲು: ರಾಜೇಶ್ ನಾಯಕ್

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸೂಪರ್ ಪವರ್ ಆಗುವತ್ತ ದಾಪುಗಾಲಿಡುತ್ತಿದೆ. ಆರ್ಥಿಕವಾಗಿ ಜಗತ್ತಿನ ಬಲಿಷ್ಠ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನದತ್ತ ಸಾಗುತ್ತಿದ್ದು, ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ತಲುಪಿದರೆ ಇನ್ನು 25 ವರ್ಷಗಳಲ್ಲಿ ಭಾರತ ಸೂಪರ್ ಪವರ್ ಆಗಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.
08:02 PM Jan 03, 2024 IST | Maithri S
ಸೂಪರ್ ಪವರ್ ಆಗುವತ್ತ ಭಾರತ ದಾಪುಗಾಲು  ರಾಜೇಶ್ ನಾಯಕ್

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸೂಪರ್ ಪವರ್ ಆಗುವತ್ತ ದಾಪುಗಾಲಿಡುತ್ತಿದೆ. ಆರ್ಥಿಕವಾಗಿ ಜಗತ್ತಿನ ಬಲಿಷ್ಠ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನದತ್ತ ಸಾಗುತ್ತಿದ್ದು, ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ತಲುಪಿದರೆ ಇನ್ನು 25 ವರ್ಷಗಳಲ್ಲಿ ಭಾರತ ಸೂಪರ್ ಪವರ್ ಆಗಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

Advertisement

ಅವರು ಬಡಗಬೆಳ್ಳೂರು ಗ್ರಾಮ ಪಂಚಾಯತ್, ಬ್ಯಾಂಕ್ ಆಫ್ ಬರೋಡ, ಪೊಳಲಿ ಇವರ ಸಹಯೋಗದಲ್ಲಿ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಯನ್ನು ಕೂಡ ತಲುಪಬೇಕು ಅನ್ನುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನಗಳು ದೇಶಾದ್ಯಂತ ಎಲ್ಲಾ ಪಂಚಾಯಿತಿಗಳನ್ನು ತಲುಪುತ್ತಿದ್ದು ಜನರು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

Advertisement

ಬ್ಯಾಂಕ್ ಆಫ್ ಬರೋಡದ ಜನರಲ್ ಮ್ಯಾನೇಜರ್, ಜಯಶ್ರೀ ಮಾತನಾಡಿ, ಜನರು ಯೋಜನೆಗಳ ಸವಲತ್ತುಗಳನ್ನು ಪಡೆದುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದು ಸೂಚಿಸಿದರು.

ಬಡಗಬೆಳ್ಳೂರು ಪಂಚಾಯತ್ ಅಧ್ಯಕ್ಷರಾದ ರೂಪಾಶ್ರೀ , ನವದೆಹಲಿಯಿಂದ ಆಗಮಿಸಿದ ಡೆಪ್ಯುಟಿ ಸೆಕ್ರೆಟರಿ, ಗುರು ದೀಪ್ ಸಿಂಗ್, ನಬಾರ್ಡ್ ನ ಡಿಡಿಎಂ ಮಾಲಿನಿ ಸುವರ್ಣ, ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕ, ಎರವನ್ ರೆಡ್ಡಿ, ಬ್ಯಾಂಕ್ ಆಫ್ ಬರೋಡದ ಡಿಜಿಎಂ ಅಶ್ವಿನ್ ಕುಮಾರ್, ಪ್ರಾದೇಶಿಕ ವ್ಯವಸ್ಥಾಪಕ ಎಸ್ ಎಸ್ ಪ್ರಸಾದ್, ಎಲ್‌ಡಿಎಂ, ಕವಿತಾ ಶೆಟ್ಟಿ, ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು, ಬ್ಯಾಂಕ್ ಆಫ್ ಬರೋಡ ಪೊಳಲಿಯ ಪ್ರಬಂಧಕರಾದ ನಿತಿನ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ ಪೂಜಾರಿ, ವಿವಿಧ ಇಲಾಖೆಗಳು ಹಾಗೂ ಬ್ಯಾಂಕಿನ ಅಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಬ್ಯಾಂಕಿನ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಎಫ್ ಎಲ್ ಸಿ ಅನುಷಾ ಮಾಹಿತಿ ನೀಡಿದರು. ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

Advertisement
Tags :
Advertisement