For the best experience, open
https://m.newskannada.com
on your mobile browser.
Advertisement

ಸಿಯಾಚಿನ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್‌

ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಇಂದು ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.
06:03 PM Apr 22, 2024 IST | Ashitha S
ಸಿಯಾಚಿನ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್‌

ವದೆಹಲಿ: ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಇಂದು ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.

Advertisement

ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರೂ ಈ ವೇಳೆ ರಾಜನಾಥ್‌ ಜೊತೆಗೂಡಿದ್ದರು. ಸಿಯಾಚಿನ್‌ನಲ್ಲಿ ಭಾರತೀಯ ಸೇನೆ ನಿಯೋಜಿಸಿ 40 ವರ್ಷಗಳು ತುಂಬಿ ಕೆಲವೇ ದಿನಗಳು ಕಳೆದಿದ್ದು, ಈ ಸಂದರ್ಭದಲ್ಲಿ ರಾಜನಾಥ ಸಿಂಗ್‌ ಅಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಲ್ಲಿ ನಿಯೋಜನೆಗೊಂಡ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾರಾಕೋರಂ ಪರ್ವತ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್‌ ನೀರ್ಗಲ್ಲಿನಲ್ಲಿ 1984ರ ಏಪ್ರಿಲ್‌ನಲ್ಲಿ 'ಆಪರೇಷನ್‌ ಮೇಘದೂತ್‌' ಸೇನಾ ಕಾರ್ಯಾಚರಣೆಯ ಭಾಗವಾಗಿ ಸೇನೆಯನ್ನು ನಿಯೋಜಿಸಲಾಗಿತ್ತು.

Advertisement

Advertisement
Tags :
Advertisement