ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮನವಮಿ ಹಿನ್ನಲೆ: ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ

ರಾಮನವಮಿ ಆಚರಣೆಯ ಕಾರಣ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
08:41 AM Apr 16, 2024 IST | Ashika S

ಬೆಂಗಳೂರು: ರಾಮನವಮಿ ಆಚರಣೆಯ ಕಾರಣ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಸಾಮಾನ್ಯವಾಗಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರತಿ ಬಾರಯೂ ಬಿಬಿಎಂಪಿ ಈ ಕ್ರಮ ಕೈಗೊಳ್ಳುತ್ತದೆ.

ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿ ಹಬ್ಬವನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನಾಂಕದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನು ಜನಿಸಿದ ದಿನ ಇದಾಗಿದೆ.

Advertisement

ರಾಮ ನವಮಿ ಹಬ್ಬವು ಚೈತ್ರ ನವರಾತ್ರಿಯ ಕೊನೆಯ ದಿನವಾಗಿದೆ. ಚೈತ್ರ ನವರಾತ್ರಿ ರಾಮ ನವಮಿಯೊಂದಿಗೆ ಕೊನೆಗೊಳ್ಳುತ್ತದೆ. ರಾಮನವಮಿಯಂದು ಶ್ರೀರಾಮನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಈ ದಿನದಂದು, ಭಗವಾನ್ ರಾಮನ ಜೊತೆಗೆ ತಾಯಿ ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಅನ್ನೂ ಪೂಜಿಸಲಾಗುತ್ತದೆ.

Advertisement
Tags :
BBMPbengaluruLatestNewsMeatNewsKarnatakaramanavami
Advertisement
Next Article