For the best experience, open
https://m.newskannada.com
on your mobile browser.
Advertisement

ಶ್ರೀರಾಮ ಶೋಭಯಾತ್ರೆ ಮೇಲೆ ಅನ್ಯಕೋಮಿನಿಂದ ಭೀಕರ ದಾಳಿ !

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿದೆ. ದೇಶದ ಮೂಲೆ ಮೂಲೆಯಲ್ಲಿ ಶ್ರೀರಾಮನ ಭಜನೆ, ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ, ಶೋಭಯಾತ್ರೆ, ರಾಮಕಥಾ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯುತ್ತಿದೆ.
10:46 AM Jan 22, 2024 IST | Ashitha S
ಶ್ರೀರಾಮ ಶೋಭಯಾತ್ರೆ ಮೇಲೆ ಅನ್ಯಕೋಮಿನಿಂದ ಭೀಕರ ದಾಳಿ

ಮುಂಬೈ: ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿದೆ. ದೇಶದ ಮೂಲೆ ಮೂಲೆಯಲ್ಲಿ ಶ್ರೀರಾಮನ ಭಜನೆ, ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ, ಶೋಭಯಾತ್ರೆ, ರಾಮಕಥಾ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯುತ್ತಿದೆ.

Advertisement

ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಮುಂಬೈ ಥಾಣೆಯಲ್ಲಿ ನಡೆಯುತ್ತಿದ್ದ ಶ್ರೀರಾಮ ಶೋಭಯಾತ್ರೆ ಮೇಲೆ ಭೀಕರ ದಾಳಿ ನಡೆದಿದೆ. ಕಲ್ಲು ತೂರಾಟ, ಬಡಿಗೆಗಳ ಮೂಲಕ ದಾಳಿ ನಡೆಸಿದ್ದು, ಹಲವು ರಾಮ ಭಕ್ತರು ಗಾಯಗೊಂಡಿದ್ದಾರೆ. ಇತ್ತ ಶೋಭಯಾತ್ರೆಗೆ ಬಳಸಿದ ಕಾರುಗಳು ಜಖಂ ಗೊಂಡಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದೆ. ಜೈಶ್ರೀರಾಮ್ ಘೋಷಣೆಯೊಂದಿಗೆ ಸಾಗಿದ ಶ್ರೀರಾಮ ಶೋಭಯಾತ್ರೆ ಮೇಲೆ ಏಕಾಏಕಿ ದಾಳಿಯಾಗಿದೆ. ಇದೊಂದು ಪೂರ್ವನಿಯೋಜಿತ ದಾಳಿ ಎಂದು ರಾಮ ಭಕ್ತರು ಆರೋಪಿಸಿದ್ದಾರೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗುತ್ತಾ ಶೋಭಯಾತ್ರೆ ಮೇಲೆ ದಾಳಿ ನಡೆದಿದೆ.

Advertisement

200ಕ್ಕೂ ಹೆಚ್ಚು ಅನ್ಯಕೋಮಿನ ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ. ಶಾಂತಿಯುತವಾಗಿ ಸಾಗುತ್ತಿದ್ದ ಶ್ರೀರಾಮನ ಶೋಭಯಾತ್ರೆ ಮೇಲಿನ ದಾಳಿಯ ಭೀಕರ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದಾಳಿ ಬೆನ್ನಲ್ಲೇ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ತಕ್ಷಣವೇ ಕ್ರಮಕ್ಕೆ ಆಗ್ರಹಿಸಲಾಗಿದೆ.

Advertisement
Tags :
Advertisement