ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬನ್ನಳ್ಳಿ: ರಾಮಲಿಂಗೇಶ್ವರ ದೇಗುಲಕ್ಕೆ ₹2.50 ಕೋಟಿ

'ತಾಲ್ಲೂಕಿನ ಬನ್ನಳ್ಳಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಸಂರಕ್ಷಣೆ ಹಾಗೂ ಜೀರ್ಣೊದ್ಧಾರಕ್ಕಾಗಿ ಕೇಂದ್ರ ಸರ್ಕಾರವು ₹2.50 ಕೋಟಿ ಅನುದಾನ ಮಂಜೂರು ಮಾಡಿದೆ' ಎಂದು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
07:58 AM Mar 01, 2024 IST | Gayathri SG

ಬೀದರ್: 'ತಾಲ್ಲೂಕಿನ ಬನ್ನಳ್ಳಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಸಂರಕ್ಷಣೆ ಹಾಗೂ ಜೀರ್ಣೊದ್ಧಾರಕ್ಕಾಗಿ ಕೇಂದ್ರ ಸರ್ಕಾರವು ₹2.50 ಕೋಟಿ ಅನುದಾನ ಮಂಜೂರು ಮಾಡಿದೆ' ಎಂದು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

Advertisement

ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯು ದೇವಸ್ಥಾನದ ಜೀರ್ಣೊದ್ಧಾರ ಮಾಡಲಿದೆ.

ಮೂರ್ನಾಲ್ಕು ತಿಂಗಳ ಹಿಂದೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆಯವರು ದೇವಸ್ಥಾನದ ಅಭಿವೃದ್ಧಿ ಕುರಿತು ನನ್ನೊಂದಿಗೆ ಚರ್ಚಿಸಿದ್ದರು. ಅದರ ಇತಿಹಾಸದ ಕುರಿತು ತಿಳಿಸಿದ್ದರು.

Advertisement

ದೇವಸ್ಥಾನಕ್ಕೆ ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಕರೆದೊಯ್ದು ವಿವರಿಸಿದ್ದರು. ಬಳಿಕ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವ ಕಳಿಸಲಾಗಿತ್ತು. ಈ ಕುರಿತು ಇಲಾಖೆಯ ಸಚಿವ ಜಿ. ಕಿಶನ್‌ ರೆಡ್ಡಿ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿದ್ದೆ. ಅದಕ್ಕೆ ಅವರು ಸ್ಪಂದಿಸಿದ್ದಾರೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
BIDARLatestNewsNewsKannadaಬನ್ನಳ್ಳಿರಾಮಲಿಂಗೇಶ್ವರದೇವಸ್ಥಾನ
Advertisement
Next Article