ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ  ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
02:11 PM Mar 02, 2024 IST | Ashika S

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ  ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Advertisement

ಸಿಎಂ ಆಗಮನ ಹಿನ್ನೆಲೆ ಆಸ್ಪತ್ರೆಗಳ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡ್ತಿರೋ ವೈದ್ಯ ರವಿಬಾಬು ಸಿಎಂಗೆ ಮಾಹಿತಿ ನೀಡಿದ್ದಾರೆ.

ಬ್ರೂಕ್​ ಫೀಲ್ಡ್​ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ತೆರಳಿ  ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

Advertisement

ಇನ್ನು ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಇನ್ನು ಎರಡು ದಿನದಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತನಿಖೆಯಲ್ಲಿ ಏಕೆ, ಯಾರು ಮಾಡಿದ್ದಾರೆ ಎಂದು ಗೊತ್ತಾಗಲಿದೆ. ಕುಕ್ಕರ್​ ಸ್ಫೋಟ ಪ್ರಕರಣ​​, ಈ ಕೇಸ್​ಗೂ ಸಾಮ್ಯತೆ ಇದೆಯಾ ಎಂದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಗಾಯಾಳುಗಳ ಆಸ್ಫತ್ರೆ ವೆಚ್ಚ ಸರ್ಕಾರ ಭರಿಸಲು ನಿರ್ಧಾರ ಮಾಡಿದೆ. ಬೆಸ್ಟ್ ಟ್ರೀಟ್ಮೆಂಟ್ ಕೊಡೋದಕ್ಕೆ ಹೇಳಿದ್ದೀನಿ. ಗಾಯಾಳುಗಳಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಸ್ವರ್ಣಾಂಬ ಎಂಬುವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಶಂಕಿತ ಹೋಗಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಸ್ಕ್ ಹಾಕಿಕೊಂಡಿದ್ದಾನೆ, ಬಸ್ ನಲ್ಲಿ ಬಂದಿರೋ ಸುಳಿವು ಸಿಕ್ಕಿದೆ. ಪೊಲೀಸರು ಆದಷ್ಟು ಬೇಗ ಶಂಕಿತನನ್ನ ಪತ್ತೆ ಹಚ್ಚುತ್ತಾರೆ. ಇನ್ನೂ ಯಾರು ಅಂತಾ ಗೊತ್ತಾಗಲಿಲ್ಲ ಯಾವ ಸಂಘಟನೆ ಅಂತಾ ತನಿಖೆ ಆಗುತ್ತೆ. ಬಿಜೆಪಿ ಅವರ ಕಾಲದಲ್ಲೂ ಭಧ್ರತೆ ಫೆಲ್ಯೂರ್ ಆಗಿಲ್ವಾ? ಅವರ ಕಾಲದಲ್ಲೂ ಬ್ಲಾಸ್ಟ್ ಆಗಿದೆ ಅವರ ಕಾಲದಲ್ಲೂ ಫೇಲ್ಯೂರ್ ಆಗಿದೆ ಎಂದು ಹೇಳಿದರು.

ಇನ್ನು ಮತ್ತೊಂದೆಡೆ ವೈದೇಹಿ ಆಸ್ಪತ್ರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನಾಲ್ವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

 

Advertisement
Tags :
LatetsNewsNewsKannadaಪ್ರಕರಣಬಾಂಬ್ ಸ್ಫೋಟಮುಖ್ಯಮಂತ್ರಿ ಸಿದ್ದರಾಮಯ್ಯರಾಮೇಶ್ವರಂ ಕೆಫೆ
Advertisement
Next Article