ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಪ್ರಕರಣ: ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ ಎಂದ ಸಿಎಂ

ಕುಂದಲಹಳ್ಳಿಯಲ್ಲಿರೋ ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಸಂಭವಿಸಿರೋದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ.
08:19 PM Mar 01, 2024 IST | Ashika S

ಬೆಂಗಳೂರು: ಕುಂದಲಹಳ್ಳಿಯಲ್ಲಿರೋ ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಸಂಭವಿಸಿರೋದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ.

Advertisement

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸದ್ಯ ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ. ಯಾರೋ ಒಬ್ಬರು ಬ್ಯಾಗ್ ಇಟ್ಟಿರುವುದು ತಿಳಿದಿದೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ.

ಇದು ಟೆರರಿಸ್ಟ್ ಮಾಡಿರುವ ಕುರಿತು ನಮಗೆ ಗೊತ್ತಿಲ್ಲ. ಈಗಿರುವ ಮಾಹಿತಿ ಪ್ರಕಾರ ಸ್ಥಳಕ್ಕೆ ಪೊಲೀಸರು ಹೋಗಿದ್ದಾರೆ. ಸ್ವಲ್ಪ ಸಮಯದಲ್ಲೇ ಸಂಪೂರ್ಣ ಮಾಹಿತಿ ಗೊತ್ತಾಗುತ್ತದೆ. ಸ್ಫೋಟಕ ಭಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದ್ದು ಆದರೂ ಅದು ಪರಿಣಾಮಕಾರಿಯಾಗಿದೆ ಎಂದರು.

Advertisement

ಕ್ಯಾಷಿಯರ್ ಬಳಿ ಹೋಗಿ ಟೋಕನ್ ತೆಗೆದುಕೊಂಡಿದ್ದಾನೆ. ಅವರ ಬಳಿ ಬ್ಯಾಗ್ ಇರಿಸಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗಾಯಾಳುಗಳಿಗೆ ಪರಿಹಾರ ವಿಚಾರ ನೀಡಲಾಗುತ್ತದೆ. ಈ ಕುರಿತು ಗೃಹ ಸಚಿವರು ಮಾಹಿತಿ ನೀಡ್ತಾರೆ. ಸಂಪೂರ್ಣ ಮಾಹಿತಿ ಸಿಕ್ಕಿದ ಮೇಲೆ ನಾನು ಮಾತಾಡುತ್ತೇನೆ ಎಂದಿದ್ದಾರೆ.

Advertisement
Tags :
LatetsNewsNewsKannadaಕೆಫೆರಾಮೇಶ್ವರಂ ಕೆಫೆಸಿಎಂಸ್ಫೋಟ
Advertisement
Next Article