ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರಾವಳಿ, ಮಲೆನಾಡಲ್ಲಿ ಸಾಧಾರಣ ಮಳೆ : ನಗರಗಳ ತಾಪಮಾನ ಎಷ್ಟಿದೆ

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಮತ್ತಷ್ಟು ಹೆಚ್ಚಾಗಲಿದೆ.ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆ ಇದೆ.
07:19 AM Mar 27, 2024 IST | Nisarga K
ಕರಾವಳಿ, ಮಲೆನಾಡಲ್ಲಿ ಸಾಧಾರಣ ಮಳೆ : ನಗರಗಳ ತಾಪಮಾನ ಎಷ್ಟಿದೆ

ಬೆಂಗಳೂರು : ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಮತ್ತಷ್ಟು ಹೆಚ್ಚಾಗಲಿದೆ.ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಮಳೆಯಾಗುವ ನಿರೀಕ್ಷೆ ಇದೆ.

Advertisement

ದಕ್ಷಿನ ಒಳನಾಡಿನ ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರವಾದ ಮಳೆ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಅಲ್ಲಿಲ್ಲ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ 35 ಮತ್ತು ಕನಿಷ್ಠ ತಾಪಮಾನವು 21ರ ಆಸುಪಾಸಿನಲ್ಲಿರಲಿದೆ.

Advertisement

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 21 ಡಿ.ಸೆ
ಮಂಗಳೂರು: 35 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 22 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಬೆಳಗಾವಿ: 39 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ

Advertisement
Tags :
KARAVALILatestNewsMALENADUNewsKarnatakaRAINtemperature
Advertisement
Next Article