ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸೆನ್ಸಾರ್​ ಪ್ರಕ್ರಿಯೆ ಪೂರ್ಣಗೊಳಿಸಿದ ರಂಜನಿ ರಾಘವನ್ ಅಭಿನಯದ ‘ಸತ್ಯಂ’ ಸಿನೆಮಾ

ಕೆಲವೇ ತಿಂಗಳ ಹಿಂದೆ ‘ಸತ್ಯಂ’ ಸಿನಿಮಾ ಟೀಸರ್​ ಬಿಡುಗಡೆ ಆಗಿತ್ತು. ಟೀಸರ್​ ನೋಡಿದ ಎಲ್ಲರಿಗೂ ಕೌತುಕ ಮೂಡಿದೆ. ಈಗ ಈ ಸಿನಿಮಾದ ಬಿಡುಗಡೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಆ ಟೀಸರ್​ಗೆ 10 ಲಕ್ಷಕ್ಕೂ ಅಧಿಕ ವೀವ್ಸ್​ ಸಿಕ್ಕಿತ್ತು.
02:54 PM May 05, 2024 IST | Ashika S

ಬೆಂಗಳೂರು: ಕೆಲವೇ ತಿಂಗಳ ಹಿಂದೆ ‘ಸತ್ಯಂ’ ಸಿನಿಮಾ ಟೀಸರ್​ ಬಿಡುಗಡೆ ಆಗಿತ್ತು. ಟೀಸರ್​ ನೋಡಿದ ಎಲ್ಲರಿಗೂ ಕೌತುಕ ಮೂಡಿದೆ. ಈಗ ಈ ಸಿನಿಮಾದ ಬಿಡುಗಡೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಆ ಟೀಸರ್​ಗೆ 10 ಲಕ್ಷಕ್ಕೂ ಅಧಿಕ ವೀವ್ಸ್​ ಸಿಕ್ಕಿತ್ತು.

Advertisement

‘ಸತ್ಯಂ’ ಸಿನಿಮಾವನ್ನು ನೋಡಿದ ಸೆನ್ಸಾರ್​ ಮಂಡಳಿಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರಂತೆ. ಅದು ಚಿತ್ರತಂಡಕ್ಕೆ ಖುಷಿ ನೀದಿದೆ. ಯಾವುದೇ ಕಟ್ ನೀಡದೇ ‘ಯು/ಎ’ ಪ್ರಮಾಣಪತ್ರ ಕೊಡಲಾಗಿದೆ. ಈ ಸಿನಿಮಾದಲ್ಲಿ ಮಾಸ್​ ಅಂಶಗಳು ಇವೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಸಂತೋಷ್​ ಬಾಲರಾಜ್​ ನಟನೆಯ ‘ಸತ್ಯಂ’ ಸಿನಿಮಾಗೆ ಅಶೋಕ್​ ಕಡಬ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಮಹಾಂತೇಶ್​ ವಿ.ಕೆ. ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರಂಜನಿ ರಾಘವನ್ ನಟಿಸಿದ್ದಾರೆ.

Advertisement

ಟೀಸರ್​ಗೆ ಸಿನಿಪ್ರಿಯರಿಂದ ಮೆಚ್ಚುಗೆ ಸಿಕ್ಕಿರುವುದಕ್ಕೆ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿದೆ. ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಆರಾಧನೆಯ ಕಹಾನಿ ಇದೆ ಎಂದು ನಿರ್ದೇಶಕರು ಹೇಳಿದ್ದಾರೆ.

ರವಿ ಬಸ್ರೂರು ಅವರು ‘ಸತ್ಯಂ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನೆಟೆಕ್ ಸೂರಿ ಛಾಯಾಗ್ರಹಣ ಮಾಡಿದ್ದಾರೆ. ಸಂತೋಷ್ ಬಾಲರಾಜ್, ರಂಜಿನಿ ರಾಘವನ್ ಜೊತೆ ಸುಮನ್, ಪವಿತ್ರಾ ಲೋಕೇಶ್, ಸೈಯಾಜಿ ಶಿಂಧೆ, ಅವಿನಾಶ್, ಮುಖ್ಯಮಂತ್ರಿ ಚಂದ್ರು, ವಿನಯಾ ಪ್ರಸಾದ್, ಎಂ.ಎನ್. ಲಕ್ಷ್ಮಿದೇವಿ, ತನುಶ್ರೀ, ಶೃಂಗೇರಿ ರಾಮಣ್ಣ, ಎಂ.ಎಸ್. ಉಮೇಶ್, ಮೀನಾಕ್ಷಿ, ಬಸವರಾಜ್ ಕಟ್ಟಿ ಮುಂತಾದ ಕಲಾವಿದರು ನಟಿಸಿದ್ದಾರೆ.

Advertisement
Tags :
LatetsNewsNewsKarnatakaRanjani RaghavanSANDALWOOD
Advertisement
Next Article