ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣ.
11:00 AM May 03, 2024 IST | Ashitha S

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣ.

Advertisement

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್​ಐಆರ್​ಗೆ ಹೊಸದಾಗಿ ಐಪಿಸಿ ಸೆಕ್ಷನ್​​ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜ್ವಲ್​ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಸಿಆರ್​​ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ.

Advertisement

ಇನ್ನು ಮೊದಲನೆಯದಾಗಿ ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹೆಚ್​​.ಡಿ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್​ಐಟಿ ನೋಟಿಸ್​ ನೀಡಿದೆ. ಆದರೆ ಎಸ್​ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್​ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದಿದೆ.

Advertisement
Tags :
BJPBreakingNewsCongresscrimeindiaKARNATAKANewsKarnatakaಪ್ರಜ್ವಲ್ ರೇವಣ್ಣಬೆಂಗಳೂರು
Advertisement
Next Article