ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅತ್ಯಾಚಾರ ಸಂತ್ರಸ್ತೆಯ ಮೇಲೆ ಗುಂಡಿನ ದಾಳಿ: ಇಬ್ಬರ ಬಂಧನ

ಅತ್ಯಾಚಾರ ಸಂತ್ರಸ್ತೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ 24 ವರ್ಷದ ಅತ್ಯಾಚಾರ ಸಂತ್ರಸ್ತೆ ಮೇಲೆ ಮೂರು ಮಂದಿ ದಾಳಿ ನಡೆಸಿದ್ದಾರೆ. ಮಹಿಳೆ ತನ್ನ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಪ್ರಾಗ್ಪುರ ಬಳಿ ಮೂವರು ವ್ಯಕ್ತಿಗಳು ಆಕೆಯ ಮೇಲೆ ಗುಂಡು ಹಾರಿಸಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.
02:22 PM Feb 26, 2024 IST | Ashitha S

ರಾಜಸ್ಥಾನ: ಅತ್ಯಾಚಾರ ಸಂತ್ರಸ್ತೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ 24 ವರ್ಷದ ಅತ್ಯಾಚಾರ ಸಂತ್ರಸ್ತೆ ಮೇಲೆ ಮೂರು ಮಂದಿ ದಾಳಿ ನಡೆಸಿದ್ದಾರೆ. ಮಹಿಳೆ ತನ್ನ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಪ್ರಾಗ್ಪುರ ಬಳಿ ಮೂವರು ವ್ಯಕ್ತಿಗಳು ಆಕೆಯ ಮೇಲೆ ಗುಂಡು ಹಾರಿಸಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.

Advertisement

ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಜೈಪುರದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಮೂವರು ಆರೋಪಿಗಳಲ್ಲಿ ಇಬ್ಬರನ್ನು ಮಹಿಪಾಲ್ ಮತ್ತು ರಾಹುಲ್ ಗುರ್ಜರ್ ಎಂದು ಗುರುತಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಜೂನ್ 2023 ರಲ್ಲಿ ಮಹಿಳೆ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದ ಮೂರನೇ ಆರೋಪಿ ರಾಜೇಂದ್ರ ಯಾದವ್ ತಲೆಮರೆಸಿಕೊಂಡಿದ್ದಾನೆ. ಶನಿವಾರ ಸಂಜೆ ಮಹಿಳೆ ಮತ್ತು ಆಕೆಯ ಸಹೋದರ ಮನೆಗೆ ತೆರಳುತ್ತಿದ್ದಾಗ ಅವರನ್ನು ಯಾದವ್ ಮತ್ತು ಇತರರು ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Advertisement

ಇನ್ನು ಘಟನೆಯ ನಂತರ ಹಲವಾರು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪ್ರಕರಣದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

 

Advertisement
Tags :
crimeEXPOSURE OF RAPE VICTIM DETAILSindiaKotputli-BehrorLatestNewsNewsKannadaPOLICERAJASTHAN
Advertisement
Next Article