ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಂಗೀತ ಮಾಂತ್ರಿಕ, ಪದ್ಮಶ್ರೀ ಪುರಸ್ಕೃತ ಉಸ್ತಾದ್‌ ರಶೀದ್‌ ಖಾನ್‌ ನಿಧನ

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು 55 ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.ರಾತ್ರಿ ಕೋಲ್ಕತ್ತಾದ ಪೀಸ್ ಹೆವನ್‌ಗೆ ಅವರ ಪಾರ್ಥಿವ ಶರೀರವನ್ನು ಕಳುಹಿಸಲಾಗುವುದು. ಅವರ ಅಂತ್ಯಕ್ರಿಯೆ ಜನವರಿ 10 ರಂದು ನಡೆಯಲಿದೆ ಎಂದು ಕುಟುಂಬ ತಿಳಿಸಿದೆ.
05:01 PM Jan 09, 2024 IST | Ashitha S

ನವದೆಹಲಿ: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು 55 ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.ರಾತ್ರಿ ಕೋಲ್ಕತ್ತಾದ ಪೀಸ್ ಹೆವನ್‌ಗೆ ಅವರ ಪಾರ್ಥಿವ ಶರೀರವನ್ನು ಕಳುಹಿಸಲಾಗುವುದು. ಅವರ ಅಂತ್ಯಕ್ರಿಯೆ ಜನವರಿ 10 ರಂದು ನಡೆಯಲಿದೆ ಎಂದು ಕುಟುಂಬ ತಿಳಿಸಿದೆ.

Advertisement

2022ರಲ್ಲಿ ಕೇಂದ್ರ ಸರ್ಕಾರ ಇವರಿಗೆ ದೇಶದ ಮೂರನೇ ಅತ್ಯುನ್ನತ ನಾಗರೀಕ ಪುರಸ್ಕಾರವಾದ ಪದ್ಮಭೂಷಣ ಪ್ರಶಸ್ತಿ ನೀಡಿಯೂ ಗೌರವಿಸಿತ್ತು. 1968ರ ಜುಲೈ 1 ರಂದು ಜನಿಸಿದ್ದ ಉಸ್ತಾದ್‌ ರಶೀದ್‌ ಖಾನ್‌, ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದರು.

ಅವರು ರಾಂಪುರ-ಸಹಸ್ವಾನ್ ಘರಾನಾಗೆ ಸೇರಿದವರು ಮತ್ತು ಘರಾನಾ ಸಂಸ್ಥಾಪಕ ಇನಾಯತ್ ಹುಸೇನ್ ಖಾನ್ ಅವರ ಮೊಮ್ಮಗ.  55 ವರ್ಷದ  ಖಾನ್  ವೆಂಟಿಲೇಟರ್‌ನಲ್ಲಿದ್ದರು. ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್  ಆದ ನಂತರ ಖಾನ್ ಅವರ ಆರೋಗ್ಯವು ಕ್ಷೀಣಿಸಿತು. ರಾಂಪುರ-ಸಹಸ್ವಾನ್ ಘರಾನಾದ ಖಾನ್  ಆರಂಭದಲ್ಲಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದಾಗ್ಯೂ, ನಂತರದ ಹಂತದಲ್ಲಿ, ಅವರು ತಮ್ಮ ಚಿಕಿತ್ಸೆಯನ್ನು ಕೋಲ್ಕತ್ತಾದಲ್ಲಿ  ಮುಂದುವರಿಸಲು ನಿರ್ಧರಿಸಿದರು.

Advertisement

Advertisement
Tags :
BREAKINGGOVERNMENTindiaNewsKannadaನವದೆಹಲಿಪದ್ಮಶ್ರೀ ಪುರಸ್ಕೃತರಶೀದ್‌ ಖಾನ್‌ಸಂಗೀತ ಮಾಂತ್ರಿಕ
Advertisement
Next Article