ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ ಶ್ರೀಕೃಷ್ಣಮಠಕ್ಕೆ ರವಿಶಂಕರ್ ಗುರೂಜಿ ಭೇಟಿ

ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ, ಆಧ್ಯಾತ್ಮಗುರು ರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶ್ರೀಪುತ್ತಿಗೆ ಮಠದ ಆಮಂತ್ರಣದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರು ಆತ್ಮೀಯವಾಗಿ ಬರಮಾಡಿಕೊಂಡರು. ಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.
05:34 PM Feb 20, 2024 IST | Gayathri SG

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ, ಆಧ್ಯಾತ್ಮಗುರು ರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶ್ರೀಪುತ್ತಿಗೆ ಮಠದ ಆಮಂತ್ರಣದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರು ಆತ್ಮೀಯವಾಗಿ ಬರಮಾಡಿಕೊಂಡರು. ಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.

Advertisement

ಬಳಿಕ ಕೃಷ್ಣ ದೇವರ ದರ್ಶನವನ್ನು ಮಾಡಿಸಿ ದೇವರ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ರವಿಶಂಕರ ಗುರೂಜಿ ಅವರಲ್ಲಿ ಶ್ರೀಕೃಷ್ಣನೇ ನಿಂತು ಅಮೋಘವಾದ ಕಾರ್ಯವನ್ನು ನಡೆಸುತ್ತಿದ್ದಾನೆ. ಅಪಾರ ಶಿಷ್ಯರನ್ನು ಹೊಂದಿರುವ ರವಿಶಂಕರ ಗುರೂಜಿ ಅವರು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ನಮ್ಮ ಉಪಾಸ್ಯನಾದ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಿಸಲಿ ಎಂದು ಹಾರೈಸಿದರು.

ಮಠದ ಗೌರವವನ್ನು ಸ್ವೀಕರಿಸಿ ಮಾತನಾಡಿದ ರವಿಶಂಕರ ಗುರೂಜಿ, ಪುತ್ತಿಗೆ ಶ್ರೀಪಾದರ ಧರ್ಮಪ್ರಚಾರ ಕಾರ್ಯಯೋಜನೆ ಅಭಿನಂದನೀಯ. ದೇಶ ವಿದೇಶಗಳಲ್ಲಿ ನಿರಂತರವಾಗಿ ಸಂಚರಿಸುತ್ತಾ ಧರ್ಮಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿರುವ ಪುತ್ತಿಗೆ ಶ್ರೀಪಾದರ ಕಾರ್ಯಯೋಜನೆ ಶ್ಲಾಘನೀಯ ಎಂದರು.

Advertisement

ಆಹಾರಗಳ ನಿಯಮ, ಅನುಷ್ಠಾನಗಳ ಆಚರಣೆಗಳಿಂದ ಯತಿಧರ್ಮದ ಕಠಿಣ ಆಚರಣೆಯನ್ನು ನಡೆಸುತ್ತಾ ಶ್ರೀಕೃಷ್ಣ ಮಂದಿರಗಳನ್ನು ಪ್ರತಿಷ್ಠಾಪಿಸಿದ್ದಾರೆ. ಕಳೆದ ನಲವತ್ತು ವರ್ಷಗಳ ಸುದೀರ್ಘವಾದ ಆತ್ಮೀಯತೆ ನಮ್ಮಿಬ್ಬರಲ್ಲಿ ದೃಢವಾಗಿದೆ. ಅವರ ಪರ್ಯಾಯವು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಹಾಗೂ ಕೋಟಿ ಗೀತಾ ಲೇಖನ ಯಜ್ಞದ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ ಎಂದು ಅವರು ತಿಳಿಸಿದರು.

ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಿ ಗೀತಾರತಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Advertisement
Tags :
LatestNewsNewsKannadaravishankargurujiUDUPIಶ್ರೀಕೃಷ್ಣಮಠ
Advertisement
Next Article