For the best experience, open
https://m.newskannada.com
on your mobile browser.
Advertisement

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ, ಹೊಸ ಹುಮ್ಮಸ್ಸಿನಲ್ಲಿದೆ. ಇನ್ನು ಪಂಜಾಬ್ ವಿರುದ್ಧ ಆರ್​​ಸಿಬಿ ಗೆದ್ದರೂ ಪಾಯಿಂಟ್ಸ್ ಟೇಬಲ್​ನ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
10:50 AM May 10, 2024 IST | Ashitha S
ಪ್ಲೇ ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​  ಆರ್‌ಸಿಬಿ ಪಾಯಿಂಟ್ಸ್ ಎಷ್ಟು

ಮುಂಬೈ: ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ, ಹೊಸ ಹುಮ್ಮಸ್ಸಿನಲ್ಲಿದೆ. ಇನ್ನು ಪಂಜಾಬ್ ವಿರುದ್ಧ ಆರ್​​ಸಿಬಿ ಗೆದ್ದರೂ ಪಾಯಿಂಟ್ಸ್ ಟೇಬಲ್​ನ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Advertisement

ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 8 ಪಾಯಿಂಟ್ಸ್​​ನಿಂದ 10 ಪಾಯಿಂಟ್ಸ್​​ಗೆ ಜಿಗಿದಿದೆ. ಜೊತೆಗೆ ನೆಟ್​ ರನ್​ ರೇಟ್ ಕೂಡ ಹೆಚ್ಚಿಕೊಂಡಿದೆ. ಆದರೆ ಪಾಯಿಂಟ್ಸ್ ಟೇಬಲ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಐದು ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ಸದ್ಯ 7ನೇ ಸ್ಥಾನದಲ್ಲಿದೆ.

ಇನ್ನು ಪಾಯಿಂಟ್ಸ್​ ಟೇಬಲ್​ನಲ್ಲಿ ಕೆಕೆಆರ್ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ್, ಎಸ್​ಆರ್​ಹೆಚ್, ಸಿಎಸ್​​ಕೆ ನಂತರದ ಸ್ಥಾನದಲ್ಲಿವೆ. ಇನ್ನು 6 ಪಂದ್ಯಗಳನ್ನು ಗೆದ್ದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಎಲ್​ಎಸ್​ಜಿ ಐದು ಮತ್ತು ಆರನೇ ಸ್ಥಾನದಲ್ಲಿವೆ. ಇನ್ನು ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇ-ಆಫ್ ರೇಸ್​ನಿಂದ ಹೊರ ಬಿದ್ದಿವೆ. ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಕೂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆಯೇ. ಆದರೆ ಇವತ್ತು ಸಿಎಸ್​​ಕೆ ತಂಡವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಏನಾದರೂ ಮ್ಯಾಜಿಕ್ ನಡೆದರೆ ಗುಜರಾತ್​ ಪ್ಲೇ-ಆಫ್ ಕನಸು ಕಾಣಬಹುದು.

Advertisement

Advertisement
Tags :
Advertisement