For the best experience, open
https://m.newskannada.com
on your mobile browser.
Advertisement

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
05:01 PM May 09, 2024 IST | Ashitha S
ಇಂದಿನ ಆರ್​​​ಸಿಬಿ  ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು

ಮುಂಬೈ: ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಹೀಗಾಗಿ ಧರ್ಮಶಾಲಾ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಮ್​​ನಲ್ಲಿ ನಡೆಯಬೇಕಿದ್ದ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್​ ಕಿಂಗ್ಸ್​​ ನಡುವಿನ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.

ಇನ್ನು ಆರ್‌ಸಿಬಿ ಇತ್ತೀಚೆಗಷ್ಟೇ ಬ್ಯಾಕ್​ ಟು ಬ್ಯಾಕ್​ 3 ಪಂದ್ಯ ಗೆದ್ದು ಕಮ್​ಬ್ಯಾಕ್​ ಮಾಡಿದೆ. 11 ಪಂದ್ಯಗಳಲ್ಲಿ ಕೇವಲ 8 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹವಾಮಾನ ವರದಿ ಪ್ರಕಾರ ರಾತ್ರಿ 7 ಗಂಟೆಯಿಂದ 10ರ ನಡುವೆ ಮಳೆ ಬರುವ ಸಾಧ್ಯತೆ ಇದೆ. ಹಾಗಾಗಿ ಪಂದ್ಯ ರದ್ದು ಕೂಡ ಆಗಬಹುದು ಎನ್ನಲಾಗ್ತಿದೆ.

Advertisement

ಆದ್ರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Advertisement
Tags :
Advertisement