ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವುಮೆನ್ಸ್ ಪ್ರೀಮಿಯರ್ ಲೀಗ್​ 2024: ಪ್ಲೇಆಫ್​​ಗೆ ಎಂಟ್ರಿಕೊಟ್ಟ ಆರ್‌ಸಿಬಿ

ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.
06:45 AM Mar 13, 2024 IST | Ashitha S

ದೆಹಲಿ:  ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್  ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

Advertisement

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಎಲ್ಲಿಸ್ ಪೆರ್ರಿ ಅವರ ಮಾರಕ ದಾಳಿಗೆ ತತ್ತರಿಸಿತು. ಲಯ ಬದ್ಧ ಬೌಲಿಂಗ್ ದಾಳಿ ಸಂಘಟಿಸಿದ ಪೆರ್ರಿ ಕೇವಲ 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ 19 ಓವರ್​ಗಳಲ್ಲಿ 113 ರನ್​ಗಳಿಸಿ ಮುಂಬೈ ಇಂಡಿಯನ್ಸ್ ಆಲೌಟ್ ಆಯಿತು.

114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 7 ವಿಕೆಟ್​ಗಳ ಜಯ ಸಾಧಿಸಿ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಲೀಗ್ ಹಂತದಲ್ಲಿ ಆಡಿರುವ 4 ಜಯ ಸಾಧಿಸಿದ್ದು, ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಅತ್ತ ನಾಲ್ಕನೇ ಮತ್ತು ಐದನೇ ಸ್ಥಾನಗಳಲ್ಲಿದ್ದ ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಂಡಗಳು ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದೆ. ಇತ್ತ ಪ್ಲೇಆಫ್ ಪ್ರವೇಶಿಸಿರುವ ಆರ್​ಸಿಬಿ ತಂಡವು ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

Advertisement

Advertisement
Tags :
indiaLatestNewsNewsKannadaRCB
Advertisement
Next Article