For the best experience, open
https://m.newskannada.com
on your mobile browser.
Advertisement

WPL 2024: ಮೊದಲ ಬಾರಿಗೆ ಫೈನಲ್​ಗೇರಿದ ಆರ್‌ಸಿಬಿ

ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಮೊದಲ ಬಾರಿಗೆ ಫೈನಲ್​ಗೇರಿದೆ.
07:26 AM Mar 16, 2024 IST | Gayathri SG
wpl 2024  ಮೊದಲ ಬಾರಿಗೆ ಫೈನಲ್​ಗೇರಿದ ಆರ್‌ಸಿಬಿ

ನವದೆಹಲಿ: ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಮೊದಲ ಬಾರಿಗೆ ಫೈನಲ್​ಗೇರಿದೆ.

Advertisement

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 135 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್‌ ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 130 ರನ್‌ ಗಳಿಸಿ 5 ರನ್‌ಗಳ ಅಂತರದಲ್ಲಿ ಸೋಲನುಭವಿಸಿತು.

ಟೂರ್ನಿಯ ಎರಡನೇ ಸೀಸನ್‌ನ ಅಂತಿಮ ಪಂದ್ಯ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಡೆಲ್ಲಿ ತಂಡ ಈಗಾಗಲೇ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

Advertisement

Advertisement
Tags :
Advertisement