ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನ ಮೂರು ಕೆರೆಗಳಿಗೆ ಮರುಜೀವ ನೀಡಿದ ಆರ್​ಸಿಬಿ

ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ ಪಕ್ಕದಲ್ಲಿ ನಾಗರಿಕ ಸೌಲಭ್ಯಗಳನ್ನು ಸೇರಿಸಿದೆ.
10:13 PM Apr 19, 2024 IST | Ashitha S

ಬೆಂಗಳೂರು: ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ ಪಕ್ಕದಲ್ಲಿ ನಾಗರಿಕ ಸೌಲಭ್ಯಗಳನ್ನು ಸೇರಿಸಿದೆ.

Advertisement

ರಾಜಾನುಕುಂಟೆ ಸಮೀಪದ ಇಟ್ಟಗಲ್ಲಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ ಆರ್​ಸಿಬಿ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಿದೆ. ಅಕ್ಟೋಬರ್ 2023 ರಲ್ಲಿ ಆರ್​ಸಿಬಿ ಈ ಯೋಜನೆ ಪ್ರಾರಂಭಿಸಿತ್ತು. ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬೋರ್​ವೆಲ್​ಗಳನ್ನು 1000 ರಿಂದ 1500 ಅಡಿಗಳವರೆಗೆ ಕೊರೆಸಬೇಕಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ. ಹೀಗಾಗಿ ಈ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.

ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಅಷ್ಟೇನೂ ಹೇಳಿಕೊಳ್ಳುವಂತಿಲ್ಲ. ತಂಡ ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಸೋತಿದ್ದು, ಏಕೈಕ ಗೆಲುವಿನೊಂದಿಗೆ 2 ಅಂಕಗಳೊಂದಿಗೆ ಪ್ರಸ್ತುತ 10 ತಂಡಗಳ ಪೈಕಿ ಕೊನೆಯ ಸ್ಥಾನದಲ್ಲಿದೆ. ಅದಾಗ್ಯೂ ಆರ್​ಸಿಬಿ ಕ್ರಿಕೆಟ್ ಮೈದಾನದಿಂದ ಹೊರಗೆ ಮಾಡುತ್ತಿರುವ ತನ್ನ ಉದ್ಧಾತ ಕಾರ್ಯಗಳಿಂದಾಗಿ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದೆ. ಇದೀಗ ಅಂತಹದ್ದೇ ಕೆಲಸದಿಂದಾಗಿ ಆರ್​ಸಿಬಿ ಮತ್ತೊಮ್ಮೆ ಎಲ್ಲರ ಮನ್ನಣೆಗೆ ಪಾತ್ರವಾಗಿದೆ.

Advertisement

ಇನ್ನು ಇದೇ ಭಾನುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ಆರ್​ಸಿಬಿ ತನ್ನ 8ನೇ ಪಂದ್ಯವನ್ನಾಡಲಿದೆ. ಈ ಪಂದ್ಯ ಆರ್​ಸಿಬಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತದೆ. ಅದರಂತೆ ಈ ಬಾರಿಯೂ ಆರ್​ಸಿಬಿ ತಮ್ಮ ಪದ್ಧತಿಯನ್ನು ಮುಂದುವರೆಸುತ್ತಿದೆ.

ಆರ್​ಸಿಬಿ ತನ್ನ ಅಭಿಮಾನಿಗಳಲ್ಲಿ ಸ್ವಚ್ಛತೆ ಮತ್ತು ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಹಸಿರು ಜೆರ್ಸಿಯನ್ನು ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಅದರಂತೆ ಕಳೆದ ಬಾರಿ ಆರ್​ಸಿಬಿ ತನ್ನ ಈ ಅಭಿಯಾನದಡಿಯಲ್ಲಿ ಬೆಂಗಳೂರಿನ ಮೂರು ಕೆರೆಗಳನ್ನು ಪುನರುಜ್ಜೀವನಗೊಳಿಸುವುದಕ್ಕೆ ಮುಂದಾಗಿತ್ತು. ಇದೀಗ ಆರ್​ಸಿಬಿ ತಾನು ಕೈಗೆತ್ತಿಕೊಂಡಿದ್ದ ಕೆಲಸವನ್ನು ವರ್ಷದೊಳಗೆ ಪೂರೈಸಿದ್ದು, ತನ್ನ ಸತ್ಕಾರ್ಯದ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದೆ.

 

Advertisement
Tags :
GOVERNMENTindiaKARNATAKALatestNewsNewsKarnatakaRCB
Advertisement
Next Article