For the best experience, open
https://m.newskannada.com
on your mobile browser.
Advertisement

ವುಮೆನ್ಸ್ ಪ್ರೀಮಿಯರ್ ಲೀಗ್​: ಇಂದು ಆರ್​ಸಿಬಿ vs ಗುಜರಾತ್ ಜೈಂಟ್ಸ್ ಮುಖಾಮುಖಿ

ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ ಮೊದಲ ಪಂದ್ಯವನ್ನಾಡಿದೆ. ಆರ್​ಸಿಬಿ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಅತ್ತ ಗುಜರಾತ್ ಜೈಂಟ್ಸ್​ ಸೋಲನುಭವಿಸಿದೆ. ಹೀಗಾಗಿ ಇಂದಿನ ಮೊದಲ ಗೆಲುವಿಗಾಗಿ ಬೆತ್ ಮೂನಿ ಪಡೆ ಕಣಕ್ಕಿಳಿಯಲಿದೆ.
08:44 AM Feb 27, 2024 IST | Ashitha S
ವುಮೆನ್ಸ್ ಪ್ರೀಮಿಯರ್ ಲೀಗ್​   ಇಂದು ಆರ್​ಸಿಬಿ vs ಗುಜರಾತ್ ಜೈಂಟ್ಸ್ ಮುಖಾಮುಖಿ

ಮುಂಬೈ : ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ ಮೊದಲ ಪಂದ್ಯವನ್ನಾಡಿದೆ. ಆರ್​ಸಿಬಿ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಅತ್ತ ಗುಜರಾತ್ ಜೈಂಟ್ಸ್​ ಸೋಲನುಭವಿಸಿದೆ. ಹೀಗಾಗಿ ಇಂದಿನ ಮೊದಲ ಗೆಲುವಿಗಾಗಿ ಬೆತ್ ಮೂನಿ ಪಡೆ ಕಣಕ್ಕಿಳಿಯಲಿದೆ.

Advertisement

ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದ್ದು, ಟಾಸ್ ಪ್ರಕ್ರಿಯೆ 7 ಗಂಟೆಗೆ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

Advertisement

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ (ನಾಯಕಿ), ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

Advertisement
Tags :
Advertisement