For the best experience, open
https://m.newskannada.com
on your mobile browser.
Advertisement

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ ಉಂಟು ಮಾಡಿದೆ.
08:07 AM May 19, 2024 IST | Chaitra Kulal
ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್​ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ ಉಂಟು ಮಾಡಿದೆ.

Advertisement

ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

ಏಕೆಂದರೆ ಆರ್​ಸಿಬಿ ತಂಡಕ್ಕೆ ಮುಂದಿನ ಎದುರಾಳಿಯಾಗಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡ ಸಿಗಬಹುದು. ಇಲ್ಲಿ ಉಭಯ ತಂಡಗಳಿಗೂ ಒಂದೊಂದು ಪಂದ್ಯ ಬಾಕಿಯಿದ್ದು, ಈ ಪಂದ್ಯಗಳ ಫಲಿತಾಂಶದ ಬಳಿಕ ಇದು ನಿರ್ಧಾರವಾಗಲಿದೆ.

Advertisement

ಅಂದರೆ ಇಂದಿನ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋತು, ಪಂಜಾಬ್ ಕಿಂಗ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ, ಆರ್​ಸಿಬಿ ತಂಡಕ್ಕೆ ಆರ್​ಆರ್​ ಎದುರಾಳಿಯಾಗಿ ಸಿಗಲಿದೆ.

ಒಂದು ವೇಳೆ ವೇಳೆ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೋತರೆ, ಆರ್​ಸಿಬಿ ತಂಡದ ಎದುರಾಳಿ ಎಸ್​ಆರ್​ಹೆಚ್​ ತಂಡ. ಇನ್ನು ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಎಲಿಮಿನೇಟರ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಇಂದು ಮಧ್ಯಾಹ್ನ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್​ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜಯ ಸಾಧಿಸಿದರೆ ಆರ್​ಸಿಬಿ ಎಸ್​ಆರ್​ಹೆಚ್​ ವಿರುದ್ಧ ಎಲಿಮಿನೇಟರ್ ಪಂದ್ಯವಾಡುವುದು ಖಚಿತವಾಗಲಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಎರಡು ಪಂದ್ಯಗಳ ಫಲಿತಾಂಶದೊಂದಿಗೆ ಆರ್​ಸಿಬಿ ತಂಡದ ಮುಂದಿನ ಎದುರಾಳಿ ಯಾರು ಎಂಬುದು ನಿರ್ಧಾರವಾಗಲಿದೆ.

Advertisement
Tags :
Advertisement