For the best experience, open
https://m.newskannada.com
on your mobile browser.
Advertisement

ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ

ಇರಾನ್‌ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
02:45 PM Apr 14, 2024 IST | Ashitha S
ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ

ಟೆಲ್‌ ಅವೀವ್‌: ಇರಾನ್‌ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Advertisement

ಭಾರತೀಯರೆಲ್ಲರೂ ಶಾಂತವಾಗಿರಿ, ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಕ್ರಮಗಳಿಗೆ ಬದ್ಧರಾಗಿರಿ.

ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದೆ.

Advertisement

ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಗಳನ್ನು ನೀಡಿದ್ದು, ಎಲ್ಲಾ ಭಾರತೀಯ ಪ್ರಜೆಗಳು ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚಿಸಿದೆ.

ಪಶ್ಚಿಮ ಏಷ್ಯಾ ವಲಯದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ಇಸ್ರೇಲ್ ಮತ್ತು ಇರಾನ್ ನಡುವೆ ಹಗೆತನ ಹೆಚ್ಚುತ್ತಿರುವ ಬಗ್ಗೆ ಭಾರತ ಗಂಭೀರವಾಗಿ ಚಿಂತಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ಬೆಳಿಗ್ಗೆ ಹೇಳಿಕೆ ಬಿಡುಗಡೆ ಮಾಡಿತ್ತು.

ಇತ್ತ, ಇರಾನ್ ಉಡಾಯಿಸಿದ 200 ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಕ್ರೂಸ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳಲ್ಲಿ ಹೆಚ್ಚಿನವುಗಳನ್ನು ಭೂಮಿಗೆ ಅಪ್ಪಳಿಸುವ ಮೊದಲೇ ಮಿತ್ರರಾಷ್ಟ್ರಗಳ ಸಹಾಯದಿಂದ ತಡೆಹಿಡಿಯಲಾಗಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

Advertisement
Tags :
Advertisement