For the best experience, open
https://m.newskannada.com
on your mobile browser.
Advertisement

ಮೋದಿ ಭೇಟಿಗೆ ಸಿಕ್ಕಿತು ಫಲ : ರಷ್ಯಾ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ಅಸ್ತು

ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ರಾಜತಾಂತ್ರಿಕ ಸಾಧನೆಯನ್ನು ಸಾಧಿಸಿದ್ದು, ರಷ್ಯಾದ ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಭಾರತೀಯರನ್ನು
01:16 PM Jul 09, 2024 IST | Nisarga K
ಮೋದಿ ಭೇಟಿಗೆ ಸಿಕ್ಕಿತು ಫಲ   ರಷ್ಯಾ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ಅಸ್ತು
ಮೋದಿ ಭೇಟಿಗೆ ಸಿಕ್ಕಿತು ಫಲ : ರಷ್ಯಾ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ಅಸ್ತು

ಮಾಸ್ಕೋ: ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ರಾಜತಾಂತ್ರಿಕ ಸಾಧನೆಯನ್ನು ಸಾಧಿಸಿದ್ದು, ರಷ್ಯಾದ ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಭಾರತೀಯರನ್ನು ಮರಳಿ ಕಳುಹಿಸುವ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

Advertisement

ಪ್ರಧಾನಿ ಮೋದಿ ಅವರು ಸೋಮವಾರ ಸಂಜೆ ರಷ್ಯಾ ತಲುಪಿದ್ದರು. ಎರಡು ದಿನಗಳ ರಷ್ಯಾ ಭೇಟಿಗಾಗಿ ಆಗಮಿಸಿದ್ದ ಪ್ರಧಾನಿ ಮೋದಿ ಅವರನ್ನು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಭಾರತೀಯ ಸಮುದಾಯ ಗಾರ್ಬಾ ನೃತ್ಯದ ಮೂಲಕ ಸ್ವಾಗತಿಸಿತ್ತು.

ರಷ್ಯಾ ಮತ್ತು ಉಕ್ರೈನ್‌ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿರುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಷ್ಯಾ ಸೇನೆಯಲ್ಲಿ ನೇಮಕ ಮಾಡಿಕೊಂಡಿರುವ ಎಲ್ಲಾ ಭಾರತೀಯ ಪ್ರಜೆಗಳನ್ನು ಬಿಡುಗಡೆಗೊಳಿಸುವಂತೆ ವಿಷಯ ಪ್ರಸ್ತಾಪಿಸಲು ಭಾರತ ನಿರ್ಧರಿಸಿತ್ತು.

Advertisement

Advertisement
Tags :
Advertisement