For the best experience, open
https://m.newskannada.com
on your mobile browser.
Advertisement

ರಾಮಲಲ್ಲಾ ಪ್ರತಿಷ್ಠಾಪನೆಯ ದಿನ ರಜೆಗಾಗಿ ಕರ್ನಾಟಕ ಸರ್ಕಾರಕ್ಕೆ ಮನವಿ

ಜ.೨೨ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ಕೇಂದ್ರ ಸರ್ಕಾರ ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಇಂತಹ ಬೇಡಿಕೆಗಳು ಕೇಳಿಬರುತ್ತಿವೆ.
08:11 PM Jan 19, 2024 IST | Maithri S
ರಾಮಲಲ್ಲಾ ಪ್ರತಿಷ್ಠಾಪನೆಯ ದಿನ ರಜೆಗಾಗಿ ಕರ್ನಾಟಕ ಸರ್ಕಾರಕ್ಕೆ ಮನವಿ

ಬೆಂಗಳೂರು: ಜ.೨೨ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಅಂಗವಾಗಿ ಕೇಂದ್ರ ಸರ್ಕಾರ ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಇಂತಹ ಬೇಡಿಕೆಗಳು ಕೇಳಿಬರುತ್ತಿವೆ.

Advertisement

ಈ ಕುರಿತು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿಯವರು ಸಿಎಂ ಸಿದ್ದರಾಮಯ್ಯನಿಗೆ ಪತ್ರ ಬರೆದು ವಿನಂತಿಸಿದ್ದಾರೆ.

ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಅಂದು ಅರ್ಧ ದಿನ ಅಥವ ಇಡೀ ದಿನ ರಜೆ ಘೋಷಿಸುವಂತೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮನವಿ ಮಾಡಿದ್ದಾರೆ.
ಈಗಾಗಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮುಂದೆಯೂ ಈ ಬೇಡಿಕೆ ಇಡಲಾಗಿದೆ.

Advertisement

ಕೇಂದ್ರ ಸರ್ಕಾರದ ಕಡೆಯಿಂದ ಜ.೨೨ರಂದು ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಛೇರಿಗಳು ಹಾಗು ಸಂಸ್ಥೆಗಳು ಮಧ್ಯಾಹ್ನ ೨:೩೦ವರೆಗೆ ಮುಚ್ಚಿರಲಿದ್ದು, ಅನಂತರ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಇದರೊಂದಿಗೆ ಕೇಂದ್ರದ ಶಾಲಾ- ಕಾಲೇಜುಗಳು ಮತ್ತು ಕೇಂದ್ರ ಕೈಗಾರಿಕಾ ವಲಯಗಳಿಗೂ ಅರ್ಧ ದಿನದ ರಜೆ ಘೋಷಿಸಲಾಗಿದೆ.

Advertisement
Tags :
Advertisement