For the best experience, open
https://m.newskannada.com
on your mobile browser.
Advertisement

ಆಳ್ವಾಸ್‌ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಆಯುಕ್ತರಿಗೆ ಮನವಿ

ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೆ ಇದೆ.
04:33 PM Dec 27, 2023 IST | Gayathri SG
ಆಳ್ವಾಸ್‌ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಆಯುಕ್ತರಿಗೆ ಮನವಿ

ಮೂಡುಬಿದಿರೆ: ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೆ ಇದೆ.

Advertisement

ಕಾಲೇಜಿನಲ್ಲಿ ಎರಡು ದಿನಗಳ ಹಿಂದೆ ನಡೆದ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಸಾವಿಗೆ ನ್ಯಾಯವನ್ನ ದೊರಕಿಸಿ ಕೊಡಬೇಕೆಂಬ ನಿಟ್ಟಿನಲ್ಲಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ರವರ ನೇತೃತ್ವದಲ್ಲಿ ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರನ್ನು ಭೇಟಿ ಮಾಡಿ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಯಿತು.

ಕಳೆದ ಕೆಲವು ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಅನುಮಾಸ್ಪದ ರೀತಿಯಲ್ಲಿ ಆತ್ಮಹತ್ಯೆಯನ್ನು ಮಾಡಿಕೊಳ್ಳುವುದರ ವಿರುದ್ಧ ಪ್ರತಿಭಟನೆಯನ್ನು ಕೂಡ ಮಾಡಲಾಗುವುದು ಎಂದು ಎಚ್ಚರಿಸಲಾಯಿತು. ನಂತರ ಮೂಡಬಿದ್ರೆಯ ಪೊಲೀಸ್ ಠಾಣೆಗೆ ತೆರಲಿ ಠಾಣಾಧಿಕಾರಿ ಸಂದೇಶ್ ಅವರಿಗೂ ಕೂಡ ಎನ್‌ ಎಸ್‌ಯುಐ ಸಮಿತಿ ವತಿಯಿಂದ ಮಾನವೀಯನ್ನ ನೀಡಲಾಯಿತು.

Advertisement

ಈ ಸಂದರ್ಭ ಮೂಡಬಿದ್ರೆ ಎನ್‌ ಎಸ್‌ಯುಐ ಅಧ್ಯಕ್ಷ ಶ್ರವಣ್ ಆಳ್ವ, ಎನ್‌ ಎಸ್‌ಯುಐ ಮುಖಂಡರಾದಂತಹ ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಂಷ್ಠನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.

Advertisement
Tags :
Advertisement