For the best experience, open
https://m.newskannada.com
on your mobile browser.
Advertisement

ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದ್ರು: ಜಿ.ಟಿ ದೇವೇಗೌಡ 

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಅವರನ್ನು ಭೇಟಿಯಾದ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ  ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂಬ ನೋವಿನಲ್ಲಿ ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದರು ಎಂದು ಅವರು ಹೇಳಿದ್ದಾರೆ.
04:02 PM May 13, 2024 IST | Ashika S
ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದ್ರು  ಜಿ ಟಿ ದೇವೇಗೌಡ 

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಅವರನ್ನು ಭೇಟಿಯಾದ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ  ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂಬ ನೋವಿನಲ್ಲಿ ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದರು ಎಂದು ಅವರು ಹೇಳಿದ್ದಾರೆ.

Advertisement

ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ ಅವರು, ರೇವಣ್ಣ ಜೈಲಿಗೆ ಹೋದ ದಿನದಿಂದ ಅವರ ಭೇಟಿಗೆ ಬಂದಿರಲಿಲ್ಲ. ಇಂದು (ಸೋಮವಾರ) ಅವರನ್ನು ಭೇಟಿಯಾಗಿದ್ದೇನೆ. ಅವರಿಗೆ ಈಗಲೂ ಅಭಿವೃದ್ಧಿ ಕಾರ್ಯಕ್ರಮಗಳದ್ದೇ ಚಿಂತೆ. ಅಲ್ಲದೇ ನಾನೇನೂ ತಪ್ಪು ಮಾಡಿದ್ದೇನೆ ಎಂಬ ಚಿಂತೆಯಲ್ಲಿದ್ದಾರೆ ಎಂದರು.

ಸಂತ್ರಸ್ತ ಮಹಿಳೆ ಜೊತೆ ಮಾತನಾಡಿ ಆರು ವರ್ಷಗಳಾಗಿವೆ. ನನ್ನನ್ನು ಈ ಪ್ರಕರಣದಲ್ಲಿ ಸೇರಿಸಿ ಹೀಗೆ ಮಾಡಿದ್ದಾರೆ. ನಾನು ತಪ್ಪು ಮಾಡಿದ್ರೆ ಇನ್ನೂ ಶಿಕ್ಷೆ ಕೊಡಲಿ ಅನುಭವಿಸಬಹುದಿತ್ತು ಎಂದು ರೇವಣ್ಣ ಭಾವುಕರಾದರು ಎಂದು ಅವರು ಹೇಳಿದ್ದಾರೆ.

Advertisement

ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ ಅವರು, ರಾಜಕೀಯ ಹೇಗೆ ನಡೆಯುತ್ತಿದೆ? ನಾವು ಎಲ್ಲೆಲ್ಲಿ ಎಡವಿದ್ದೇವೆ? ನಮ್ಮ ಸರ್ಕಾರದ ಇದ್ದಾಗ ಕಾರ್ಯಕರ್ತರಿಗೆ ಏನೂ ಮಾಡಲು ಆಗಲಿಲ್ಲ. ಅಲ್ಪಾವಧಿ ಅಧಿಕಾರ ಬಂತು. ಅಧಿಕಾರ ಅನುಭವಿಸಿದವರು ಹೊರಟು ಹೋದ್ರು. ಮಂತ್ರಿಯಾಗಿದ್ದವರು ಹೊರಟು ಹೋದ್ರು. ನೀವು ಗೌಡರಿಗೋಸ್ಕರ ಪಕ್ಷದಲ್ಲಿ ಉಳಿದು ಗೌಡರಿಗೆ ನೆಮ್ಮದಿ ಕೊಟ್ಟಿದ್ದೀರಿ ಎಂದು ವಿಚಾರ ಹಂಚಿಕೊಂಡಿದ್ದಾರೆ.

ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಎಂದು ಪದೇ ಪದೇ ಸಿಎಂ ಹೇಳ್ತಿದ್ದಾರೆ. ಪೆನ್‍ಡ್ರೈವ್ ಯಾರು ರಿಲೀಸ್ ಮಾಡಿದ್ರು? ಯಾರೂ ತಪ್ಪು ಮಾಡಿದ್ದಾರೆ ಎಲ್ಲವನ್ನೂ ತನಿಖೆ ಮಾಡಿ ಕಂಡುಹಿಡಿದು ಸಿಎಂ ಇತಿಹಾಸ ಸೃಷ್ಟಿಸಲಿ ಎಂದು ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿಚಾರವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ರೇವಣ್ಣ ಕೂಡ ಪ್ರಜ್ವಲ್ ಬಗ್ಗೆ ಏನೂ ಹೇಳಲಿಲ್ಲ ಎಂದರು.

Advertisement
Tags :
Advertisement