For the best experience, open
https://m.newskannada.com
on your mobile browser.
Advertisement

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿ ಇಂದು (ಮೇ 8) ವಿಚಾರಣೆಗೆ ಬರಲಿದೆ.
08:29 AM May 08, 2024 IST | Nisarga K
ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ   ಬೇಲಾ  ಜೈಲಾ  ಇಂದೇ ನಿರ್ಣಾಯಕ
ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿ ಇಂದು (ಮೇ 8) ವಿಚಾರಣೆಗೆ ಬರಲಿದೆ.

Advertisement

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಕಿಡ್ನ್ಯಾಪ್​ ಪ್ರಕರಣದಲ್ಲಿ ಎಸ್​ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥವಾ ಜೈಲು ಪಾಲಾಗ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.

Advertisement

Advertisement
Tags :
Advertisement