For the best experience, open
https://m.newskannada.com
on your mobile browser.
Advertisement

ಪಡಿತರ ಅಕ್ಕಿಗೆ ಕನ್ನ: 69,000 ರೂ. ಮೌಲ್ಯದ ಅಕ್ಕಿ ವಶಕ್ಕೆ

2 ಕೋಟಿ ರೂ. ಮೌಲ್ಯದ 6,077 ಕ್ವಿಂಟಲ್ ಪಡಿತರ ಅಕ್ಕಿ ಕಳ್ಳತನ ಪ್ರಕರಣದ ತನಿಖೆ ನಡೆಯುತ್ತಿರುವ ಹೊತ್ತಿನಲ್ಲೇ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಗೆ ಕನ್ನ ಹಾಕಿರುವ ಘಟನೆ ರಾಯಚೂರಿನ ಸುರಪುರದಲ್ಲಿ ನಡೆದಿದೆ.
10:12 AM Feb 04, 2024 IST | Ashitha S
ಪಡಿತರ ಅಕ್ಕಿಗೆ ಕನ್ನ  69 000 ರೂ  ಮೌಲ್ಯದ ಅಕ್ಕಿ ವಶಕ್ಕೆ

ಯಾದಗಿರಿ: 2 ಕೋಟಿ ರೂ. ಮೌಲ್ಯದ 6,077 ಕ್ವಿಂಟಲ್ ಪಡಿತರ ಅಕ್ಕಿ ಕಳ್ಳತನ ಪ್ರಕರಣದ ತನಿಖೆ ನಡೆಯುತ್ತಿರುವ ಹೊತ್ತಿನಲ್ಲೇ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಗೆ ಕನ್ನ ಹಾಕಿರುವ ಘಟನೆ ರಾಯಚೂರಿನ ಸುರಪುರದಲ್ಲಿ ನಡೆದಿದೆ.

Advertisement

ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. ಯಾದಗಿರಿ ಜಿಲ್ಲೆಯ ಸುರಪುರದಿಂದ ರಾಯಚೂರು ಜಿಲ್ಲೆಯ ಲಿಂಗಸೂರಿಗೆ ಸಾಗಾಟಮಾಡಲಾಗುತ್ತಿತ್ತು. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸುರಪುರ ಠಾಣೆ ಪೊಲೀಸರು 69,000 ರೂ. ಮೌಲ್ಯದ ಪಡಿತರ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.

50 ಕೆಜಿಯ 45 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ ಪಡಿತರ ಅಕ್ಕಿ ಪತ್ತೆಯಾಗಿದ್ದು, ಗೂಡ್ಸ್ ವಾಹನದಲ್ಲಿ ಪತ್ತೆಯಾಗಿದೆ. ಪೊಲೀಸರು ತಡೆಹಿಡಿಯುತ್ತಿದ್ದಂತೆ ಚಾಲಕ ಅಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಚಾಲಕನನ್ನ ಬಂಧಿಸಲು ಬಲೆ ಬೀಸಿದ್ದಾರೆ.

Advertisement

Advertisement
Tags :
Advertisement