ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಿಷಭ್ ಪಂತ್​ಗೆ ಗ್ರೀನ್​ ಸಿಗ್ನಲ್ ನೀಡಿದ ಎನ್‌ಸಿಎ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ರಿಷಭ್ ಪಂತ್ ಕಣಕ್ಕಿಳಿಯುವುದು ಖಚಿತವಾಗಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್​ ಅಕಾಡೆಮಿಯಲ್ಲಿ(ಎನ್‌ಸಿಎ) ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಿಷಭ್ ಪಾಸ್ ಆಗಿದ್ದು, ಈ ಮೂಲಕ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಅದರಂತೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಣಕ್ಕಿಳಿಯಲಿದೆ.
08:05 AM Mar 11, 2024 IST | Ashitha S

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ರಿಷಭ್ ಪಂತ್ ಕಣಕ್ಕಿಳಿಯುವುದು ಖಚಿತವಾಗಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್​ ಅಕಾಡೆಮಿಯಲ್ಲಿ(ಎನ್‌ಸಿಎ) ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಿಷಭ್ ಪಾಸ್ ಆಗಿದ್ದು, ಈ ಮೂಲಕ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಅದರಂತೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಣಕ್ಕಿಳಿಯಲಿದೆ.

Advertisement

ಇದಕ್ಕೂ ಮುನ್ನ ರಿಷಭ್ ಪಂತ್ ಫಿಟ್​ನೆಸ್ ಟೆಸ್ಟ್​ನಲ್ಲಿ ವಿಫಲರಾದರೆ, ಅವರು ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್​ನಲ್ಲಿ ತಮ್ಮ ಸಾಮರ್ಥ್ಯವನ್ನು ಪಂತ್ ತೆರೆದಿಟ್ಟಿದ್ದು, ಈ ಮೂಲಕ ಐಪಿಎಲ್​ ಆಡಲು NCA ಕಡೆಯಿಂದ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

ಅತ್ತ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಈ ಬಾರಿಯ ಐಪಿಎಲ್ ರಿಷಭ್ ಪಂತ್ ಪಾಲಿಗೆ ನಿರ್ಣಾಯಕ. ಏಕೆಂದರೆ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಂತ್ ಐಪಿಎಲ್​ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ ರಿಷಭ್ ಅವರ ಟೀಮ್ ಇಂಡಿಯಾ ಕಂಬ್ಯಾಕ್​ ಅನ್ನು ಕೂಡ ನಿರ್ಧರಿಸಲಿದೆ.

Advertisement

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಅವರ ಮರಳುವಿಕೆಯಿಂದ ನಾಯಕತ್ವ ಕೂಡ ಬದಲಾಗಲಿದೆ. ಅಂದರೆ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಇದೀಗ ಪಂತ್ ಕಂಬ್ಯಾಕ್​ನಿಂದಾಗಿ ವಾರ್ನರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ರಿಷಭ್ ಪಂತ್ ಸಾರಥ್ಯದಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ.

 

Advertisement
Tags :
indiaLatestNewsNewsKannadaನವದೆಹಲಿರಿಷಭ್ ಪಂತ್
Advertisement
Next Article