For the best experience, open
https://m.newskannada.com
on your mobile browser.
Advertisement

ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಮಹಿಳೆ ಸಾವು

ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಅಸುನೀಗಿದ್ದಾರೆ.
07:51 PM Apr 26, 2024 IST | Ashitha S
ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ  ಮಹಿಳೆ ಸಾವು

ಉಡುಪಿ: ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಅಸುನೀಗಿದ್ದಾರೆ.

Advertisement

ಇಂದು ಕಾರ್ಯಕ್ರಮವೊಂದಕ್ಕೆ ತಮ್ಮ ನಿವಾಸದಿಂದ ತೆರಳುತ್ತಿದ್ದ ವೇಳೆ ಪತಿ ಪುರುಷೋತ್ತಮ ಅಭ್ಯಂಕರ್‌ ಅವರು ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಈ ದುರಂತ ನಡೆದಿದೆ. ದುರಂತದಲ್ಲಿ ಪುರುಷೋತ್ತಮ್ ಅಭ್ಯಂಕರ್ ರ ಧರ್ಮಪತ್ನಿ ಶ್ರೀಮತಿ ಸುಮಾ(೫೧) ರವರು ಮೃತಪಟ್ಟಿದ್ದಾರೆ. ಈ ಕುರಿತು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Advertisement
Advertisement
Tags :
Advertisement