ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ಗೆ ಬಿಗ್‌ ರಿಲೀಫ್‌

ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರಾಕ್ ಲೈನ್ ಮಾಲ್​ಗೆ ಹಾಕಲಾಗಿದ್ದ ಬೀಗ ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ ನೀಡಿದೆ.
03:23 PM Feb 19, 2024 IST | Ashitha S

ಬೆಂಗಳೂರು: ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರಾಕ್ ಲೈನ್ ಮಾಲ್​ಗೆ ಹಾಕಲಾಗಿದ್ದ ಬೀಗ ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ ನೀಡಿದೆ.

Advertisement

ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ರಾಕ್ ಲೈನ್ ಮಾಲ್​ಗೆ ಬೀಗ ಹಾಕಿರುವುನ್ನು ಪ್ರಶ್ನಿಸಿ ರಾಕ್‌ ಲೈನ್‌ ವೆಂಕಟೇಶ್‌ ಹೈಕೋರ್ಟ್‌ ಮೇಟ್ಟಿಲೇರಿದ್ದರು.ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ ಮಾಲೀಕತ್ವದ ರಾಕ್ ಲೈನ್ ಮಾಲ್​ಗೆ ಬೀಗ ಹಾಕಿತ್ತು.

ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ರಾಕ್ ಲೈನ್ ಮಾಲ್​ಗೆ ಬೀಗ ಹಾಕಿದ್ದರು. ರಾಕ್​ಲೈನ್ ಮಾಲ್​ 2011 ರಿಂದ 2022-23 ರವರೆಗೆ ಒಟ್ಟು 11.51 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿತ್ತು. ಹಾಗಾಗಿ ಬಿಬಿಎಂಪಿ ಕಂದಾಯ ಅಧಿಕಾರಿಗಳು ರಾಕ್ ಲೈನ್ ಮಾಲ್ ಸೀಜ್‌ ಮಾಡಿದ್ದರು. ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಈ ಕ್ರಮ ಪ್ರಶ್ನಿಸಿ ರಾಕ್‌ ಲೈನ್‌ ವೆಂಕಟೇಶ್‌ ಹೈಕೋರ್ಟ್‌ ಮೇಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆದಿದ್ದು, ರಾಕ್‌ ಲೈನ್‌ ಮಾಲ್‌ನಲ್ಲಿ ವ್ಯಾಪಾರಕ್ಕೆ ತೊಂದರೆ ಮಾಡಬಾರದು ಹಾಗೂ ಆಸ್ತಿ ತೆರಿಗೆ ಪಾವತಿಸದೆ ಬಗ್ಗೆ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ಹೈ ಕೋರ್ಟ್‌ ಬಿಬಿಎಂಪಿ ಕಂದಾಯ ಅಧಿಕಾರಿಗಳಿಗೆ ಆದೇಶ ನೀಡಿದೆ.

Advertisement

Advertisement
Tags :
BBMPGOVERNMENTindiaKARNATAKANewsKannadaROCKLINE VENKATESHಬೆಂಗಳೂರುರಾಕ್‌ಲೈನ್‌ವೆಂಕಟೇಶ್
Advertisement
Next Article