For the best experience, open
https://m.newskannada.com
on your mobile browser.
Advertisement

ಡ್ರೆಸ್ಸಿಂಗ್ ರೂಮ್​ನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ; ಯಾಕೆ ಗೊತ್ತ ?

ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಸೋಮವಾರ ನಡೆದ 55ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.
10:26 AM May 07, 2024 IST | Ashitha S
ಡ್ರೆಸ್ಸಿಂಗ್ ರೂಮ್​ನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ  ಯಾಕೆ ಗೊತ್ತ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಸೋಮವಾರ ನಡೆದ 55ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

Advertisement

ಸೂರ್ಯಕುಮಾರ್ ಯಾದವ್ ಅವರ ಅಮೋಘ ಶತಕದ ನೆರವಿನಿಂದ ಮುಂಬೈ 174 ರನ್​ಗಳ ಸವಾಲಿನ ಟಾರ್ಗೆಟ್ ಅನ್ನು 17.2 ಓವರ್​ಗಳಲ್ಲಿ ಬೆನ್ನಟ್ಟಿತು. ಮುಂಬೈ ಜಯ ಕಂಡರೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸಂತಸಗೊಂಡಿರಲಿಲ್ಲ. ಇವರು ಡ್ರೆಸ್ಸಿಂಗ್ ರೂಮ್​ನಲ್ಲಿ ಅಳುತ್ತಿರುವುದು ಕಂಡುಬಂತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ಪ್ರಭಾವ ಬೀರಲು ವಿಫಲರಾದರು. ಇವರು ಐಪಿಎಲ್ 2024 ರಲ್ಲಿ ಅಗ್ರ ರನ್ ಗಳಿಸಿರುವವರ ಸಾಲಿನಲ್ಲಿ 17 ನೇ ಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್ ಹತ್ತಿರವಾಗುತ್ತಿದ್ದಂತೆ ಪದೇ ಪದೇ ವೈಫಲ್ಯ ಅನುಭವಿಸುತ್ತಿರುವ ರೋಹಿತ್ ಸದ್ಯ ಕಳಪೆ ಫಾರ್ಮ್​ನಿಂದ ಕಂಗಡೆಟ್ಟಿದ್ದಾರೆ. ಸೋಮವಾರ ಎಸ್​ಆರ್​ಹೆಚ್ ವಿರುದ್ಧ ನೀಡಿದ ಕಳಪೆ ಪ್ರದರ್ಶನದ ನಂತರ ರೋಹಿತ್ ಡ್ರೆಸ್ಸಿಂಗ್ ರೂಮ್​ನಲ್ಲಿ ಅಳುತ್ತಿರುವಂತೆ ಕಂಡುಬಂತು. ಇದರ ವಿಡಿಯೋ ಈಗ ವೈರಲ್ ಆಗುತ್ತಿದೆ.

Advertisement

Advertisement
Tags :
Advertisement