ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

2 ಸಾವಿರ ರೂ. ವರೆಗೆ ಬೆಳೆ ಪರಿಹಾರ ಒದಗಿಸಲು ಮುಂದಾದ ಸರ್ಕಾರ

ರೈತರಿಗೊಂದು ಗುಡ್‌ ನ್ಯೂಸ್‌ ದೊರೆತಿದೆ. ಮೊದಲನೇ ಕಂತಿನಲ್ಲಿ 2,000 ರೂ.ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.
09:08 PM Nov 30, 2023 IST | Ashika S

ಬೆಂಗಳೂರು: ರೈತರಿಗೊಂದು ಗುಡ್‌ ನ್ಯೂಸ್‌ ದೊರೆತಿದೆ. ಮೊದಲನೇ ಕಂತಿನಲ್ಲಿ 2,000 ರೂ.ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.

Advertisement

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರಕ್ಕೆ ಬರೆದ ಪತ್ರಗಳಿಗೂ ಪ್ರತಿಕ್ರಿಯೆ ಇಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ.ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನ ಉದ್ಯೋಗ ಕೊಡಲು ಅನುಮತಿ ಕೋರಲಾಗಿತ್ತು. ಕೇಂದ್ರ ಇನ್ನೂ ಅನುಮತಿ ನೀಡಿಲ್ಲ ಎಂದರು.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌.48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 18171.44 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಸ್ ಕೊಟ್ಟರೂ ಸಾಕು ಎಂದರು.

Advertisement

Advertisement
Tags :
LatetsNewsNewsKannadaಗುಡ್ ನ್ಯೂಸ್ಪರಿಹಾರಬೆಳೆರಾಜ್ಯ ಸರ್ಕಾರರೈತ
Advertisement
Next Article