ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ. ಅನುದಾನ ಘೋಷಿಸಿದ ಸಿಎಂ

ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ  ಒದಗಿಸಲಾಗುವುದು ಎಂದು ಸಿಎಂ  ಸಿದ್ದರಾಮಯ್ಯ ಘೋಷಿಸಿದರು.
02:44 PM Jan 07, 2024 IST | Ashitha S

ಬೆಂಗಳೂರು: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ  ಒದಗಿಸಲಾಗುವುದು ಎಂದು ಸಿಎಂ  ಸಿದ್ದರಾಮಯ್ಯ ಘೋಷಿಸಿದರು.

Advertisement

ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ 50 ಲಕ್ಷ ರೂಪಾಯಿ ಅನುದಾನವನ್ನು ಒದಗಿಸುವುದಾಗಿ ಹೇಳಿದರು.

ಜತೆಗೆ ಎಲ್ಲ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಾಯ ಮಾಡಲಿದೆ ಎಂದು ಸಿಎಂ  ತಿಳಿಸಿದರು. ಇನ್ನು ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್, ಉಪಾಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.

Advertisement
Tags :
GOVERNMENTindiaKARNATAKALatestNewsNewsKannadaಚಿತ್ರಕಲಾಬೆಂಗಳೂರುಸಿದ್ದರಾಮಯ್ಯ
Advertisement
Next Article