ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಸಿದ್ಧ ದೈವ ನರ್ತಕ, ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ ನಿಧನ

ಉಡುಪಿ ಜಿಲ್ಲೆಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಸಾಧು ಪಾಣಾರ ಮಂಚಿಕೆರೆ ಅವರು (68) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.
04:55 PM Feb 12, 2024 IST | Ashitha S

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಸಾಧು ಪಾಣಾರ ಮಂಚಿಕೆರೆ ಅವರು (68) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.

Advertisement

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಇಂದು ಮಧ್ಯಾಹ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದು, ಈ ಕಲೆಯು ವಂಶಪಾರಂಪರ್ಯವಾಗಿ ಅವರಿಗೆ ಸಿದ್ಧಿಸಿದೆ. ನರ್ತನ, ನುಡಿಗಟ್ಟು, ಪಾಡ್ದನ ಕಲೆಗಳನ್ನು ಸೊಗಸಾಗಿ ನೆರವೇರಿಸಿಕೊಂಡು ಬಂದಿದ್ದಾರೆ.
ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ಅವರು ದೈವಾರಾಧನೆ ನಡೆಸಿದ್ದಾರೆ. ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿದ್ದಾರೆ.

ಅವರ ಕಲಾ ಸೇವೆಯನ್ನು ಗುರುತಿಸಿ ಈಗಾಗಲೇ ಹಲವು ಸಂಘ-ಸಂಸ್ಥೆಗಳು ಗೌರವಿಸಿವೆ. ಪತ್ನಿ ವಸಂತಿ ಪಾಣಾರ, ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧಯ ಬಳಗವನ್ನು ಅಗಲಿದ್ದಾರೆ. ಪುತ್ರ ದಿನೇಶ್‌ ಪಾಣಾರ ತಂದೆಯ ವೃತ್ತಿಯನ್ನೇ ನಡೆಸುತ್ತಿದ್ದಾರೆ

Advertisement

Advertisement
Tags :
LatestNewsNewsKannadaUDUPIದೈವ ನರ್ತಕನಿಧನಸಾಧು ಪಾಣಾರ
Advertisement
Next Article