ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆಗೆ ಭೇಟಿ ನೀಡಿದ ನಟ ಸಾಯಿಕುಮಾರ್

ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು  ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ  ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಹಂಚಿಕೊಂಡಿದ್ದಾರೆ.
02:12 PM Jan 27, 2024 IST | Ashika S

ಬೆಂಗಳೂರು:  ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು  ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ  ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

Advertisement

ಈ ಕುರಿತು ಮಾತನಾಡಿರು ಅವರು ನಾನು ನನ್ನ ಸಿನಿಮಾಗಳಲ್ಲಿ ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಕನ್ನಡಕ್ಕೆ ಹೋರಾಡು ಕನ್ನಡದ ಕಂದ’, ‘ಬಾರಿಸು ಕನ್ನಡ ಡಿಂಡಿಮವ’ ಮುಂತಾದ ಕವನಗಳನ್ನು ಹಾಗೂ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಹಾಡುತ್ತಿರುತ್ತೇನೆ. ಆದರೆ ಈವರೆಗೂ ಕುಪ್ಳಳ್ಳಿಗೆ ಹೋಗಿರಲಿಲ್ಲ. ಇತ್ತೀಚಿಗೆ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಹೋಗಿದ್ದೆ. ಪ್ರಕೃತಿಯ ಮಡಿಲಲ್ಲಿರುವ ಆ ಪುಣ್ಯಸ್ಥಳವನ್ನು ನೋಡಿ ಪುಳಕಿತನಾದೆ. ಅವರು ಬಳಸುತ್ತಿದ್ದ ಲೇಖನಿ ಹಾಗೂ ಪುಸ್ತಕ ಮುಂತಾದವುಗಳನ್ನು ಕಂಡು ಧನ್ಯನಾದೆ’ ಎಂದಿದ್ದಾರೆ.

ನಾನು ಸುಮಾರು ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕನ್ನಡ ಚಿತ್ರಗಳನ್ನು ಮಾಡುತ್ತಾ ಬಂದಿದ್ದರೂ ಕುಪ್ಪಳ್ಳಿಯನ್ನು ನೋಡುವ ಯೋಗ ಬಂದಿರಲಿಲ್ಲ. ಈಗ ಬಂದು ಅಲ್ಲಿನ ಸೊಬಗನ್ನ ಕಣ್ತುಂಬಿಕೊಂಡೆ ಎನ್ನುತ್ತಾರೆ ನಟ.

Advertisement

 

 

Advertisement
Tags :
LatetsNewsNewsKannadaಕವಿಶೈಲಕುಪ್ಪಳ್ಳಿಕುವೆಂಪುನಟರಾಷ್ಟ್ರಕವಿಸಾಯಿಕುಮಾರ್
Advertisement
Next Article