For the best experience, open
https://m.newskannada.com
on your mobile browser.
Advertisement

ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ನದಿಯಲ್ಲಿ 2 ಪಿಸ್ತೂಲ್ ಪತ್ತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗ ಯಶಸ್ವಿಯಾಗಿದೆ.
03:43 PM Apr 23, 2024 IST | Ashitha S
ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ  ನದಿಯಲ್ಲಿ 2 ಪಿಸ್ತೂಲ್ ಪತ್ತೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗ ಯಶಸ್ವಿಯಾಗಿದೆ.

Advertisement

ಗುಜರಾತ್‌ನ ತಾಪಿ ನದಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಸ್ತೂಲ್, ಮ್ಯಾಗಜೀನ್ ಮತ್ತು ಬುಲೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಆರಂಭವಾದ ಶೋಧದ ವೇಳೆ ಅಪರಾಧ ವಿಭಾಗದ ಅಧಿಕಾರಿಗಳು 2 ಪಿಸ್ತೂಲ್‌ಗಳು , ಮೂರು ಮ್ಯಾಗಜೀನ್‌ಗಳು ಮತ್ತು 13 ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಎನ್‌ಕೌಂಟರ್ ಸ್ಪೆಷಲಿಸ್ಟ್, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಸೇರಿದಂತೆ 12 ಅಧಿಕಾರಿಗಳ ತಂಡ ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಸ್ಕೂಬಾ ಡೈವರ್‌ಗಳ ಸಹಾಯದಿಂದ ಶೋಧ ಕಾರ್ಯ ನಡೆಯುತ್ತಿದೆ.

Advertisement
Tags :
Advertisement