ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಂಗಬೆಟ್ಟು: ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.
06:30 PM Dec 24, 2023 IST | Gayathri SG

ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.

Advertisement

ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

ಆರ್ಥಿಕ ಸಂಕಷ್ಟ:
ಈಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ ರೂ. 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು.

Advertisement

ಮಕ್ಕಳು ಇಲ್ಲ ಎಂಬ ಕೊರಗಿನ ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಇವರ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

Advertisement
Tags :
BANTWALBreakingNewsLatestNewsNewsKannadaSuicideCase
Advertisement
Next Article