For the best experience, open
https://m.newskannada.com
on your mobile browser.
Advertisement

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಗೀತ್ ಶಿವನ್ ಅವರಿಗೆ 61 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
09:05 AM May 09, 2024 IST | Nisarga K
ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಬೆಂಗಳೂರು: ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಗೀತ್ ಶಿವನ್ ಅವರಿಗೆ 61 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

Advertisement

ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು. ಮೋಹನ್​ಲಾಲ್​ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಗುರುತಿಸಿಕೊಂಡರು.

ರಿತೇಶ್ ದೇಶ್‌ಮುಖ್ ಅವರು ಎಕ್ಸ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. “ಸಂಗೀತ್ ಶಿವನ್ ಸರ್ ಇನ್ನಿಲ್ಲ ಎಂದು ಗೊತ್ತಾದಾಗ ತೀವ್ರ ದುಃಖ ಮತ್ತು ಆಘಾತವಾಯಿತು.ಮೃದು ಮಾತು, ಸೌಮ್ಯ ಮತ್ತು ಅದ್ಭುತ ಮನುಷ್ಯ.ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ, ಪತ್ನಿ, ಮಕ್ಕಳು, ಸಹೋದರರಿಗೆ ನನ್ನ ಸಂತಾಪʼʼಎಂದು ಬರೆದುಕೊಂಡಿದ್ದಾರೆ.

Advertisement

Advertisement
Tags :
Advertisement